- ದೇಶದಲ್ಲಿ ಸೋಂಕಿತರ ಸಾವು 1501
- ರಾಜ್ಯದಲ್ಲಿ ಸೋಂಕಿತರ ಸಾವು 81
- ಬೆಂಗಳೂರಲ್ಲಿ ಸೋಂಕಿತರ ಸಾವು 60
- ಕೋವಿಡ್ ಆಸ್ಪತ್ರೆಗಳಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವರು 620
- ಕೋಲಾರ ಜಿಲ್ಲೆಯಲ್ಲಿ 174 ಪಾಸಿಟಿವ್ ಕೇಸ್
ನ್ಯೂಜ್ ಡೆಸ್ಕ್:-ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಇತಿಹಾಸದ ದಾಖಲೆ ಬರೆದಿದೆ.ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ಪ್ರಕರಣಗಳು ದಾಖಲಾಗಿದೆ. ಇದರ ಜೊತೆಗೆ 1,501 ಮಂದಿ ಸೋಂಕಿತರು ಸಾವನ್ನಪ್ಪಿರುತ್ತಾರೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,61,500 ಸೋಂಕು ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ನಿನ್ನೆ 1,501 ಸೋಂಕಿತರು ಸಾವನ್ನಪ್ಪಿದ್ದು ಇದುವರಿಗೂ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,77,150ಕ್ಕೆ ಏರಿಕೆಯಾಗಿದಿಯಂತೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 1,38,423 ಮಂದಿ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 1,28,09,643ಕ್ಕೆ ಏರಿಕೆಯಾಗಿದ್ದು ಪ್ರಸ್ತುತ ದೇಶದಲ್ಲಿ 18,01,316 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲೂ ಕೊರೋನಾ ಅಬ್ಬರ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 19067 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.ಇದರೊಂದಿಗೆ ಸೋಂಕಿತರ ಸಂಖ್ಯೆ 11,61,065ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 81 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,351ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 12793 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 546635 ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 60 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೋವಿಡ್-19 ನಿಯಮಾವಳಿಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಿ.