- ರಾಜಕೀಯ ಪಕ್ಷಗಳು ಘೋಷಿಸುವ
- ಉಚಿತ ಯೋಜನೆ ಕುರಿತಾಗಿ
- ಕೇಂದ್ರ ಸರ್ಕಾರಕ್ಕೆ,ಚುನಾವಣೆ
- ಆಯೋಗಕ್ಕೆ ನೋಟಿಸ್ ಜಾರಿ
ನೂಜ್ ಡೆಸ್ಕ್:ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳು ನೀಡುವ ಉಚಿತ ಭರವಸೆಗಳನ್ನು ಲಂಚ ಎಂದು ಪರಿಗಣಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮನವಿಯ ಮೇರೆಗೆ, ಕೇಂದ್ರ ಸರ್ಕಾರಕ್ಕೆ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಉಚಿತ ಭರವಸೆಗಳನ್ನು ನೀಡುವುದನ್ನು ನಿಷೇಧಿಸಲು ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಈ ನೋಟಿಸ್ ಜಾರಿ ಮಾಡಿದ್ದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಕೇಂದ್ರ ಮತ್ತು ಚುನಾವಣಾ ಸಮಿತಿಗೆ ನೋಟಿಸ್ ಜಾರಿಗೊಳಿಸಿದೆ ಇದರೊಂದಿಗೆ ಇದಕ್ಕೆ ಸಂಬಂದಪಟ್ಟ ಬಾಕಿ ಇರುವ ಪ್ರಕರಣಗಳೊಂದಿಗೆ ಅರ್ಜಿಯೊಂದಿಗೆ ಸೇರ್ಪಡೆ ಮಾಡಿದೆ.
ಉಚಿತ ಭರವಸೆ ನೀಡುವ ರಾಜಕೀಯ ಪಕ್ಷಗಳ ವಿರುದ್ಧ ತಕ್ಷಣದ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ನಿವಾಸಿ ಶಶಾಂಕ್ ಜೆ ಶ್ರೀಧರ ಅವರು ಅರ್ಜಿದಾರರಾಗಿ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದರು ವಿಚಾರಣೆ ನಂತರ ಹೆಚ್ಚಿನ ಮಾಹಿತಿ ನಿರೀಕ್ಷಿಸಬಹುದಾಗಿದೆ.