ಚಿಂತಾಮಣಿ: ಚಿಂತಾಮಣಿ ನಗರದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಸಂಬಂದಿಸಿದಂತೆ ಶೀಘ್ರದಲ್ಲೇ ಮಂಜೂರಾತಿ ನೀಡಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.
ಅವರು ಚಿಂತಾಮಣಿ ನಗರ ಹೊರವಯಲದ ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ಕೋನಪಲ್ಲಿ ಬಳಿ ಸುಮಾರು 5.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ನೂತನ ಸಾರಿಗೆ ಇಲಾಖೆ RTO ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದರು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸಾರಿಗೆ ಸಂಸ್ಥೆಗೆ ನೂತನವಾಗಿ 6400 ಬಸ್ ಖರೀದಿ,9 ಸಾವಿರ ಸಿಬ್ಬಂದಿ ನೇಮಕಾತಿ,1 ಸಾವಿರ ಮಂದಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿದೆ.
ಕಳೆದ 4 ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ಒಂದೂ ಬಸ್ ಖರೀದಿ ಆಗಿರಲಿಲ್ಲ.14 ಸಾವಿರ ಜನ ಸಿಬ್ಬಂದಿ ನಿವೃತ್ತಿ ಹೊಂದಿದ್ದರೂ ನೇಮಕಾತಿ ಮಾಡಿರಲಿಲ್ಲ. ಅನುಕಂಪದ ಆಧಾರ ಯೋಜನೆಯನ್ನೂ ಯಾರಿಗೂ ಉದ್ಯೋಗ ನೀಡಿರಲಿಲ್ಲ ಎಂದು ದೂರಿದರು.
ಶಕ್ತಿ ಯೋಜನೆಯ ನಂತರ ರಾಜ್ಯದಲ್ಲಿ ಪ್ರತಿನಿತ್ಯ 20 ಲಕ್ಷ ಜನರು ಸಂಚರಿಸುತ್ತಿದ್ದಾರೆ.ಬಸ್ ಗಳ ಖರೀದಿ, ಸಿಬ್ಬಂದಿಯ ನೇಮಕಾತಿ ನಡೆಯುತ್ತಿದೆ. ವಿವಿಧೆಡೆ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಸ್ಥಾಪಿಸಲಾಗುತ್ತಿದೆ. ಚಾಲನಾ ಟ್ರಾಕ್ ಗಳ ನಿರ್ಮಾಣ ನಡೆಯುತ್ತಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂಸಿ.ಸುಧಾಕರ್ ಮಾತನಾಡಿ ಪ್ರಾದೇಶಕ ಸಾರಿಗೆ ಕಚೇರಿಯ ನೂತನ ಕಟ್ಟಡದ ನಿರ್ಮಾಣಕ್ಕಾಗಿ 6.5 ಎಕರೆ ಜಾಗ ಮಂಜೂರಾಗಿತ್ತು.ಬಸ್ ಮತ್ತು ಲಾರಿಗಳ ಚಾಲನಾ ಟ್ರಾಕ್ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ 3.5 ಎಕರೆಯನ್ನು ಮಂಜೂರು ಮಾಡಲಾಗಿದೆ.ನೂತನ ಕಟ್ಟಡ ನಿರ್ಮಾಣಕ್ಕಗಿ 5.75 ಕೋಟಿ ಮಂಜೂರಾಗಿತ್ತು.ಮತ್ತೆ ಚಾಲನಾ ಟ್ರಾಕ್ ನಿರ್ಮಾಣಕ್ಕಾಗಿ 5 ಕೋಟಿ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ
ಅತ್ಯಾಧುನಿಕವಾದ ಕಟ್ಟಡ ಮತ್ತು ಸುಸಜ್ಜಿತ ಚಾಲನಾ ಟ್ರ್ಯಾಕ್ ನಿರ್ಮಾಣವಾಗಿದೆ ಇದು ಕೇವಲ ಚಿಂತಾಮಣಿ ತಾಲ್ಲೂಕಿಗೆ ಮಾತ್ರ ಸೀಮಿತಗೊಳಿಸಬಾರದು ನೂತನವಾಗಿ ಅರಂಭವಾಗಿರುವ ಚೇಳೂರು ತಾಲ್ಲೂಕು ಮತ್ತು ಚಿಂತಾಮಣಿಗೆ ಸಮೀಪವಾಗಿರುವ ಶಿಡ್ಲಘಟ್ಟ ತಾಲ್ಲೂಕಿನ ಕೆಲವು ಹೋಬಳಿಗಳನ್ನು ಕಚೇರಿಯ ವ್ಯಾಪ್ತಿಗೆ ತರಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.
ತಾಲ್ಲೂಕಿನಲ್ಲಿ ಸ್ಥಗಿತಗೊಂಡಿದ್ದ ಬಹುತೇಕ ಮಾರ್ಗ ಮತ್ತು ಟ್ರಿಪ್ ಗಳನ್ನು ಪುನರಾರಂಭಿಸಲಾಗಿದೆ.ಅಶ್ವಮೇಧ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಚಿಂತಾಮಣಿ-ಚೇಳೂರು ರಸ್ತೆಯಲ್ಲಿ ಹೆಚ್ಚಿನ ಬಸ್ ಗಳ ಸಂಚಾರದ ಬೇಡಿಕೆ ಇದೆ.ಇರುವ ಬಸ್ ಗಳು ಸಾಕಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಇತ್ತಿಚಿಗೆ ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಹೆಚ್ಚಿನ ಬಸ್ಸುಗಳನ್ನು ಮಂಜೂರು ಮಾಡುವಂತೆ ಸಾರಿಗೆ ಸಚಿವರ ಬಳಿ ಬೇಡಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ,ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜೆಟಿ ನಿಟ್ಟಾಲಿ,ಸಾರಿಗೆ ಇಲಾಖೆ ಆಯುಕ್ತ ಯೋಗೇಶ್, ಸಹಾಯಕ ಆಯುಕ್ತಾರಾದ ಗಾಯತ್ರಿ,ಆರ್ ಟಿ ಓ ಅಧಿಕಾರಿ ವಿವೇಕಾನಂದ,ಬ್ರೇಕ ಇನ್ಸ್ಪೆಕ್ಟರ್ ವೆಂಕಟೇಶ್,ಅಧೀಕ್ಷಕ ವೇಣುಗೋಪಾಲ್,ಎಸ್ ಪಿ ಕುಶಾಲ್ ಚಾಕ್ಸೆ,ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ,ತಹಶೀಲ್ದಾರ್ ಸುದರ್ಶನ್ ಯಾದವ್,ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್, ನಗರಸಭಾ ಅಧ್ಯಕ್ಷ ಜಗನ್ನಾಥ್, ಉಪಾಧ್ಯಕ್ಷ ರಾಣಿಯಮ್ಮ,ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಎ ಆರ್ ಟಿ ಓ ಕಚೇರಿಯ ಸಿಬ್ಬಂದಿ ವರ್ಗದವರು ಇದ್ದರು.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Saturday, November 23