ನ್ಯೂಜ್ ಡೆಸ್ಕ್:ಚಳಿಗಾಲ ಶುರುವಾಗಿದೆ ಮಂಜು ಬಿಳಲು ಆರಂಭವಾಗಿದೆ. ರೈತಾಪಿ ಜನ ಕೃಷಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇಂತಹ ವಾತವರಣದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಬಗ್ಗೆ ಹೇಳಲಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿ ಮಳೆಯ ಸಂಭವ ಇದೆ ಎನ್ನುವ ಮಾತು ತಜ್ನರಿಂದ ಹೇಳಲಾಗಿದೆ..
ಈ ಬಾರಿ ಹೆಚ್ಚೇ ಎನ್ನಬಹುದಾದಷ್ಟು ಮಳೆ ಸುರುದಿದೆ ಬಿಡುವು ಕೊಡದೇ ಸತತ ಮಳೆಯಿಂದ ಬೆಳೆಗಳು ನೆಲೆ ಕಚ್ಚಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ರೈತರು ಸಾಕಷ್ಟು ಕಷ್ಟ-ನಷ್ಟ ಅನುಭವಿಸಿದ್ದಾರೆ. ಇನ್ನೇನು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ ಎನ್ನುವ ಹೊತ್ತಿನಲ್ಲಿ ಮತ್ತೆ ಮಳೆರಾಯ ಅಬ್ಬರಿಸಲು ಸಜ್ಜಾಗಿದ್ದಾನೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆಯಂತೆ.
ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಶುರುವಾಗಿದೆ.ಇತ್ತ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿ ಕರ್ನಾಟಕ ಕೇರಳ ತಮಿಳುನಾಡು ಹಾಗೂ ಶ್ರೀಲಂಕಾ ಕರಾವಳಿ ಮಾರ್ಗವಾಗಿ ಸಂಚಾರ ಮಾಡಲಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಇಂದು ಹಾಗೂ ನವೆಂಬರ್ 27ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎನ್ನುವ ಸೂಚನೆ ನೀಡಲಾಗಿದೆ. ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, ಏಳು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
Breaking News
- ಉದ್ಯೋಗ ಖಾತ್ರಿಯಲ್ಲಿ ಇನ್ನಷ್ಟು ಕಾಮಗಾರಿಗಳ ಸೇರ್ಪಡೆಗೆ ಆಂಧ್ರ DCMಮನವಿ
- ಪೆನ್ಷನ್ ಹಣ ನೀಡದ ತಾಯಿಯನ್ನು ಹೊಡೆದು ಕೊಂದ ದುರ್ಮಾರ್ಗ ಮಗ!
- ಕೋಲಾರ ಸೇರಿದಂತೆ ರಾಜ್ಯದಲ್ಲಿ ಮತ್ತೆ ಎರಡ್ಮೂರು ದಿನ ಮಳೆ
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿಗೆ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ ಪೈಪೋಟಿ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
Wednesday, November 27