ಬೆಂಗಳೂರು:ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣವನ್ನು ತನಿಖೆ ಮಾಡಲು ಆದೇಶಿಸಿದೆ. ಇದರಿಂದ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ ಸಂಬಂಧ 2018ರಲ್ಲಿ ಫೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ,ಹೈಕೋರ್ಟ್, ಮಂಜುನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿತ್ತು.
ಈ ಪ್ರಕರಣವನ್ನು ರದ್ದುಕೋರಿ ಶಾಸಕ ಕೊತ್ತೂರು ಮಂಜುನಾಥ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 12) ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ಐಆರ್ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ತಿರಸ್ಕರಿಸಿದಲ್ಲದೇ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಿದೆ.
ಪ್ರಕರಣದ ಹಿನ್ನೆಲೆ
ಪ್ರಕರಣದ ವಿವರ:ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಪರಿಶಿಷ್ಟ ಜಾತಿಗೆ ಸೇರಿರುವುದನ್ನು ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಹೈಕೋರ್ಟ್ 2018ರ ಏಪ್ರಿಲ್ನಲ್ಲಿ ಅಸಿಂಧುಗೊಳಿಸಿತ್ತು.ತೀರ್ಪಿನ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನೆ ಸಮಿತಿ ಜಿ.ಮಂಜುನಾಥ್ ಅವರ ಜಾತಿಯನ್ನು ಪರಿಶೀಲಿಸಬೇಕು. ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಬಹುದು ಎಂದು ಆದೇಶ ನೀಡಿತ್ತು. ಜಿ.ಮಂಜುನಾಥ್ ಅವರು ಬುಡುಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಬುಡುಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರುತ್ತದೆ. ಸಮಿತಿಯ ನಿರ್ಣಯ ಕುರಿತಾಗಿ ಕೊತ್ತೂರುಮಂಜುನಾಥ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
Breaking News
- ಶ್ರೀನಿವಾಸಪುರದ ಸರ್ಕಾರಿ ಕಚೇರಿ ಶಾಲ ಆವರಣಗಳೆ ಪಾರ್ಕಿಂಗ್ ಸ್ಥಳ!
- ತಿರುಮಲ ವೆಂಕಟೇಶ್ವರ ದರ್ಶನ ವಿಳಂಬ 29 ಕಂಪಾರ್ಟ್ಮೆಂಟ್ ಗಳಲ್ಲಿ ಕಾಯುತ್ತಿರುವ ಭಕ್ತರು!
- ಶ್ರೀನಿವಾಸಪುರದಲ್ಲಿ KSRTC ಬಸ್ಸಿಗೆ ಗುದ್ದೋಡಿದ ತಮಿಳುನಾಡು ಲಾರಿ!
- ಐವರು ಸಾವನಪ್ಪಿದ ಮುಳಬಾಗಿಲು ರಸ್ತೆ ಅಪಘಾತಕ್ಕೆ ಕಾರಣ ಇದೇನಾ?
- ಮುಳಬಾಗಿಲು ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ದುರ್ಮರಣ
- Girl friendಗೆ ಮೊಬೈಲ್ ಕೊಡಿಸಲು ತಾಯಿಯನ್ನೆ ಹತ್ಯೆ ಮಾಡಿದ ಪಾಪಿ ಮಗ..!
- ಕೋಲಾರ ಜಿಲ್ಲೆ ಸೇರಿದಂತೆ ಮತ್ತೆ ಮಳೆಯಾಗುವ ಸಾಧ್ಯತೆ!
- ತೆಲುಗು ಬಿಗ್ಬಾಸ್ ಸೀಸನ್ 8 ರ ಕಿರೀಟ ಗೆದ್ದ ಕನ್ನಡಿಗ ನಿಖಿಲ್
- ಕೋಲಾರ ಅರೋಗ್ಯ ಇಲಾಖೆ ನರ್ವ್ ವ್ಯವಸ್ಥೆ ಅಧ್ಯಯನ ನಡೆಸಿದ ಆಂಧ್ರ ಮಂತ್ರಿ ಲೋಕೆಶ್
- ಮಾಜಿ ಸ್ಪೀಕರ್ ರಮೇಶಕುಮಾರ್ ಪರೋಕ್ಷವಾಗಿ ಚುನಾವಣೆ ನಿವೃತ್ತಿಯ ಮಾತು!
Sunday, December 22