ಘಟನೆ ಗುಜರಾತ್’ನ ಸೂರತ್ ನಗರದ ಕೊಸಂಬಾದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಫುಟ್ ಬಾತ್ ಹತ್ತಿದೆ.
ಘಟನೆಯಲ್ಲಿ 15 ಮಂದಿ ಕಾರ್ಮಿಕರು ಸಾವನಪ್ಪಿರುತ್ತಾರೆ.
ನ್ಯೂಜ್ ಡೆಸ್ಕ್: ಗುಜರಾತ್ ರಾಜ್ಯದ ಸೂರತ್ ನಗರದ ಕೊಸಂಬಾದಲ್ಲಿ ರಣ ಭೀಕರ ಅಪಘಾತ ನಡೆದಿದ್ದು.ರಸ್ತೆಯಲ್ಲಿ ಸಾಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ(ಪುಟ್ ಬಾತ್) ನುಗ್ಗಿದ್ದು, ಅಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು 15 ಮಂದಿ ಕಾರ್ಮಿಕರು ಸಾವನಪ್ಪಿದ್ದು ಉಳಿದಂತೆ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲರೂ ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರು ಎಂದು ಹೇಳಲಾಗಿದೆ.
ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ
ಘಟನೆ ಕುರಿತಾಗಿ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಕುಟುಂಬಸ್ಥರಿಗೆ ಘಟನೆ ಕುರಿತಾಗಿ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ 2 ಲಕ್ಷ ರೂ ಹಾಗು ಗಾಯಗೊಂಡಿರುವರಿಗೆ 50 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ.