ಶ್ರೀನಿವಾಸಪುರ: ತಾಲೂಕಿನಲ್ಲಿ ಕಳೆದ ನಾಲ್ಕೈದು ದಶಕಗಳಿಂದ ಆಡಳಿತ ನಡೆಸಿದಂತ ಇಬ್ಬರು ಮುಖಂದರು ತಾಲ್ಲೂಕಿನ ಅಭಿವೃದ್ಧಿ ಮರೆತು ರಾಜಕೀಯ ಅಧಿಕಾರವನ್ನು ತಮ್ಮ ಸ್ವಂತ ಅನಕೂಲಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ವಿಧಾನಸಭಾ ಕ್ಷೇತ್ರದ ಮುಖಂಡ ಗುಂಜೂರು ಶ್ರೀನಿವಾಸ ರೆಡ್ಡಿ ಆರೋಪಿಸಿದರು.
ಅವರು ಯಲ್ದೂರು ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ತಮ್ಮ ಬಣಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ಬರಮಾಡಿಕೊಂಡು ಮಾತನಾಡಿ ಒಂದು ವರ್ಷದ ಅವಧಿಯಲ್ಲಿ ತಾಲ್ಲೂಕಿನಲ್ಲಿ ನಮ್ಮ ಸೇವಾ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಮ್ಮ ಬಣಕ್ಕೆ ಬೇರೆ ಬೇರೆ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದು ಇದು ತಾಲೂಕಿನ ರಾಜಕೀಯ ಧ್ರುವೀಕರಣಕ್ಕೆ ಮುನ್ಸೂಚನೆ ಎಂದರು.
ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಧ್ಯೇಯವಾಗಿಟ್ಟುಕೊಂಡು ತಾಲ್ಲೂಕಿನ ರಾಜಕೀಯಕ್ಕೆ ಬಂದಿರುವೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತೇ ಇಲ್ಲ, ತಾಲ್ಲೂಕಿನ ಜನತೆ ನೀಡಿದ ಅಧಿಕಾರವನ್ನು ದುರುಪಯೋಗ ಮಾಡಿಕೊಂಡವರನ್ನು ಈ ಚುನಾವಣೆಯಲ್ಲಿ ಬುದ್ದಿಕಲಿಸುವಂತೆ ಹೇಳಿದರು.
ಸಮಾರಂಭದಲ್ಲಿ ಯಲ್ದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಆನಂದ್, ಮಾಜಿ ಸದಸ್ಯ ಹರಿನಾಥ್, ಮುತ್ತಕಪಲ್ಲಿ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತ ರೆಡ್ಡಿ ಮತ್ತು ಇತರೆ ಪಕ್ಷಗಳ ಹಲವಾರು ಕಾರ್ಯಕರ್ತರು ಗುಂಜೂರು ಶ್ರೀನಿವಾಸ ರೆಡ್ಡಿ ಬಣಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅತ್ತಿಕುಂಟೆ ರಾಜಶೇಖರ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಆಚಂಪಲ್ಲಿ ವೆಂಕರವಣಪ್ಪ, ನವಕೋಟಿ ಶ್ರೀರಾಮುಲು, ಅರವಿಂದ, ನಂದಕುಮಾರ್, ಮುರಳಿ, ಎಸ್.ಎಮ್.ರವಿಚಂದ್ರ, ಗೌರೀಶ, ಷಮೀವುಲ್ಲಾ, ಮಹಮ್ಮದ್ ಆಲಿ ಇನ್ನೂ ಮುಂತಾದವರು ಇದ್ದರು.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Saturday, April 5