ನ್ಯೂಜ್ ಡೆಸ್ಕ್:ವಿಧಾನಸಭೆ ಚುನಾವಣೆಗೆ ಕೋಲಾರ ಅವಿಭಜಿತ ಕಾಂಗ್ರೆಸ್ ಮುಖಂದರು ಈಗಲಿಂದಲೇ ಪೂರ್ವತಯಾರಿ ನಡೆಸುತ್ತಿದ್ದಾರೆ ಚುನಾವಣೆ ಇನ್ನು 9-10 ತಿಂಗಳು ಬಾಕಿ ಇರುವಾಗಲೆ ವಿಶೇಷವಾಗಿ ಕೋಲಾರ ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು,ಮುಖಂಡರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸಲು ರೂಪುರೇಷೆ ಸಿದ್ದಪಡಿಸಿ ಅವರಿಗೆ ಸ್ಪರ್ದೆಗೆ ಆಹ್ವಾನ ನೀಡಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಹಾಗು ಹೋಸಕೋಟೆ ಕಾಂಗ್ರೆಸ್ ಶಾಸಕರು ಮುಖಂಡರು ಇಂದು ಮಂಗಳವಾರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತನಾಡಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ದಿಸುವಂತೆ ಅಹ್ವಾನ ನೀಡಿರುವ ಬಗ್ಗೆ ಕೇಳಿಬಂದಿದೆ.
ಇದಕ್ಕೆ ಸ್ಪಂದಿಸಿರುವ ಸಿದ್ದರಾಮಯ್ಯ ಬೆಂಗಳೂರು ಜಿಲ್ಲೆಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಆಲೋಚಿಸಿದ್ದೆನೆ. ಬಾದಾಮಿ ಕ್ಷೇತ್ರದ ಜನ ನನ್ನ ಮೇಲೆ ನಂಬಿಕೆಯಿಟ್ಟು ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಚಾಮುಂಡಿಕ್ಷೇತ್ರದ ಜನರು ಸಹ ಕರೆಯುತ್ತಿದ್ದಾರೆ. ಇದರಿಂದಾಗಿ ನಾನು ಇದುವರೆಗೂ ಯಾವುದೇ ನಿರ್ಣಯಕೈಗೊಂಡಿಲ್ಲ ನಿಮ್ಮ ಮಾತಿಗೆ ಇಲ್ಲ ಎನ್ನಲಾರೆ ಯಾವುದಕ್ಕೂ ನಾನು ಸದ್ಯಕ್ಕೆ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೇನೆ ಕ್ಷೇತ್ರದ ಕಾರ್ಯಕರ್ತರ, ಮುಖಂಡರ ಹಾಗು ಮತದಾರರ ಜೊತೆ ಚೆರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರಂತೆ.
ಕ್ಷೇತ್ರ ದೂರ ಒಡಾಡಲು ವಯಸ್ಸಿನ ಸಮಸ್ಯೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಲೋಕಲ್ ಅಥಾವ ಹತ್ತಿರ ಇರುವಂತ ಕ್ಷೇತ್ರ ಆಯ್ಕೆಮಾಡಬಹುದು ಎಂದು ರಾಜಕೀಯ ಪಂಡಿತರ ಮಾತು.
ಕೋಲಾರ ಜಿಲ್ಲಾ ಶಾಸಕರು ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಸ್ಪರ್ದಿಸಲು ಆಹ್ವಾನ ನೀಡಲು ಸಿದ್ದರಾಮಯ್ಯ ಅವರನ್ನು ಭೇಟಿಯಾದಗ ಸ್ಥಳದಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಸಿದ್ದರಾಮಯ್ಯ ಅವರ ಮಗ ಶಾಸಕ ಯತೀಂದ್ರ ಅಲ್ಲಿದ್ದರು.ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ತಂಡದಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡ, ಕೋಲಾರ ಜಿಲ್ಲೆಯ ಶಾಸಕರಾದ ಕೋಲಾರ ಕೆ.ಶ್ರೀನಿವಾಸಗೌಡ, ಬಂಗಾರಪೇಟೆ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ಕೆ.ವೈ.ನಂಜೇಗೌಡ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿ.ಮುನಿಯಪ್ಪ, ಗೌರಿಬಿದನೂರು ಶಿವಶಂಕರರೆಡ್ಡಿ, ಬಾಗೇಪಲ್ಲಿ ಸುಬ್ಬಾರೆಡ್ಡಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ,ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್, ನಜೀರ್ ಅಹಮದ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಮಾಜಿ ಶಾಸಕರಾದ ಡಾ.ಎಂ.ಸಿ.ಸುಧಾಕರ್, ಕೊತ್ತೂರು ಜಿ.ಮಂಜುನಾಥ್, ಕೋಲಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್,ಮುಖಂಡರಾದ ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಎಂ.ಮುನಿಯಪ್ಪ, ರಾಜಪ್ಪ,ಎನ್.ಮುನಿಸ್ವಾಮಿ, ಜನ್ನಘಟ್ಟ ವೆಂಕಟಮುನಿಯಪ್ಪ ಇದ್ದರು. ಇತರೆ ಮುಖಂಡರು ಕಾರ್ಯಕರ್ತರು ಇದ್ದರು.
ಕೋಲಾರ ಕಾಂಗ್ರೆಸ್ ನಲ್ಲಿ ಎಲ್ಲವು ಸರಿಯಿಲ್ಲ!
ಈಗಾಗಲೆ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಿಲ್ಲ ಎಂಬದು ಜಗಜಾಹಿರ ಮುಖಂಡರ ನಡುವಿನ ಭಿನ್ನಾಭಿಪ್ರಾಯಗಳು ಜನಸಾಮನ್ಯರು ಮಾತನಾಡಿಕೊಳ್ಳುವಷ್ಟು ಪ್ರಚಾರದಲ್ಲಿದೆ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಿನಿ ಹೈಕಮಾಂಡ್ ಆಗಿದ್ದ ಮಾಜಿ ಸಂಸದ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಹೆಚ್.ಮುನಿಯಪ್ಪ ಅವರನ್ನು ಕಾಂಗ್ರೆಸ್ ಕಡೆಗಣಿಸಿ ಚಿಂತಾಮಣಿಸುಧಾಕರ್ ಹಾಗು ಕೊತ್ತೂರುಮಂಜುನಾಥ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡ ಕಾರಣಕ್ಕೆ ಕೆ.ಎಚ್.ಮುನಿಯಪ್ಪ ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಮುನಿಸಿಕೊಂಡು ಕಾಂಗ್ರೆಸ್ ಪಕ್ಷ ಬಿಡುತ್ತಾರೆ ಎಂಬ ವದಂತಿಗಳು ಕೇಳಿಬರುತ್ತಿವೆ.