ಶ್ರೀನಿವಾಸಪುರ:ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ MLA ಟಿಕೆಟ್ ಆಕಾಂಕ್ಷಿಯಾಗಿರುವ ತಾಲೂಕಿನ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗು ಮಾಜಿ ಸಂಸದ ಮುನಿಯಪ್ಪನವರ ಆಪ್ತವಲಯದಲ್ಲಿ ಗುರ್ತಿಸಿಕೊಂಡಿರುವ ದಳಸನೂರು ಗೋಪಾಲಕೃಷ್ಣ ಈಗಿನಿಂದಲೆ ಫುಲ್ ಆಕ್ಟಿವ್ ಆಗಿದ್ದಾರೆ ಈಗಾಗಲೆ ಕ್ಷೇತ್ರಾದ್ಯಂತ ಟೂರ್ ಕಾರ್ಯಕ್ರಮ ಹಮ್ಮಿಕೊಂಡು ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತಿದ್ದು 12 ರಂದು ಶನಿವಾರ ಪಟ್ಟಣದ ವೆಂಕಟೇಗೌಡ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.
ದಳಸನೂರು ಗೋಪಾಲಕೃಷ್ಣ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡ ಪಕ್ಷದ ನಾಯಕತ್ವ ಬದಲಾದರು ಪಕ್ಷದಲ್ಲಿ ನಿಷ್ಠಾವಂತ ಮುಖಂಡನಾಗಿ ಕಳೆದ 4 ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಗುರ್ತಿಸಿಕೊಂಡಿದ್ದಾರೆ.ಕಳೆದ ಲೊಕಸಭೆ ಚುನಾವಣೆಯಲ್ಲಿ ತಮ್ಮ ನಿಷ್ಠೆಯನ್ನು ಕೆ ಎಚ್ ಮುನಿಯಪ್ಪನವರಿಗೆ ವ್ಯಕ್ತಪಡಿಸಿಕೊಂಡು ಹಾಲಿ ಶಾಸಕ ರಮೇಶ್ ಕುಮಾರ್ ಅವರಿಂದ ಅಂತರ ಕಾಪಾಡಿಕೊಳ್ಳುವ ಮೂಲಕ ತಾಲೂಕಿನ ಕಾಂಗ್ರೆಸ್ ಪಕ್ಷದಲ್ಲಿ ರೆಬಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.
ಶನಿವಾರ ಕಾರ್ಯಕರ್ತರ ಸಭೆ:ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿ ಕಾರ್ಯಕರ್ತರ ಸಭೆ ನಡೆಸುತ್ತಿರುವುದಾಗಿ ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದ ಅವರು 1994 ರಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದಿರುತ್ತೇನೆ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿರುವ ನಾನು 2023ರಲ್ಲಿ ನಡೆಯುವಂತ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ದಿಸಲು
ಕೆ.ಪಿ.ಸಿ.ಸಿ ಅಧ್ಯಕ್ಷರು ತಿಳಿಸಿರುವಂತೆ ಟಿಕೆಟ್ ಪಡೆಯಲು ಅರ್ಜಿ ಹಾಕುವುದಕ್ಕೂ ಮುಂಚಿತವಾಗಿ ಕ್ಷೇತ್ರಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರ ಹಿತೈಶಿಗಳ ಬೆಂಬಲ ಯಾಚಿಸುತ್ತಿದ್ದೇನೆ ಎಂದರು.
ನನಗೂ 60 ವರ್ಷ ಸಮೀಪಿಸುತ್ತಿದೆ ಕಾಂಗ್ರೆಸ್ ಪಕ್ಷ ನನಗೆ ಹಲವಾರು ಗುರುತರವಾದ ಜವಾಬ್ದಾರಿ ಸ್ಥಾನಗಳನ್ನು ನೀಡಿದೆ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿದ್ದೇನೆ ಎಂದ ಅವರು ವಿಧಾನಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಅರ್ಜಿಯನ್ನು ಸಲ್ಲಿಸುತ್ತೇನೆ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರ ನಿರ್ಧಾರ ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.