ಶ್ರೀನಿವಾಸಪುರ: ಈ ತಿಂಗಳ ಮೂರನೇ ಶನಿವಾರ ಮಾರ್ಚ್ 18 ರಂದು ನಡೆಯಬೇಕಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ತಾಲೂಕಿನ ಯಲ್ದೂರು ಹೋಬಳಿ ಕೊಳತೂರು ಗ್ರಾಮದಲ್ಲಿ 20 ರಂದು ಸೋಮವಾರ ನಡೆಸಲಾಯಿತು.
ತಾಲ್ಲೂಕು ಆಡಳಿತ ತಾಲೂಕು ಕಂದಾಯ ಇಲಾಖೆ ತಾಲ್ಲೂಕು ಪಂಚಾಯತಿ ಸಹಯೋಗದೊಂದಿಗೆ ತಾಲೂಕಿನ ವಿವಿಧ ಇಲಾಖೆಗಳೊಂದಿಗೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಮುಂಬರುವ ವಿಧಾನಸಭೆ ಚುನಾವಣಾ ತುರ್ತು ಕೆಲಸಗಳ ನಿಮಿತ್ತ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟರಾಜು ಆದೇಶದ ಮೇರೆಗೆ ಮಾರ್ಚ್ 18 ರಂದು ರದ್ದು ಮಾಡಿ ಸೋಮವಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದ್ದು ಇಂದು ಕೊಳತೂರು ಗ್ರಾಮದಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಈ ಭಾಗದ ಜನತೆ ಇದರ ಸದುಪಯೋಗ ಪಡಿಸಿಕೊಂಡು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆ ಹರಿಸಿಕೊಳ್ಳಿ ಎಂದು ತಹಶೀಲ್ದಾರ್ ಶೀರಿನ ತಾಜ್ ಹೇಳಿದರು.
ತಾಲೂಕು ಪಂಚಾಯಿತಿ ಇವೊ ಕೃಷ್ಣಪ್ಪ ಮಾತನಾಡಿ ಇದೊಂದು ಅಭೂತ ಪೂರ್ವಕಾರ್ಯಕ್ರಮವಾಗಿದ್ದು ಗ್ರಾಮೀಣ ಜನರ ಮನೆಬಾಗಿಲ ಬಳಿಗೆ ಆಡಳಿತ ತಂದಿರುವ ಕಾರ್ಯಕ್ರಮವಾಗಿದೆ ಇದರಿಂದ ಹಲವಾರು ಜನರಿಗೆ ಅನಕೂಲ ಆಗಿದೆ ಎಂದ ಅವರು ಇವತ್ತಿನ ನಡೆ ಹಳ್ಳಿ ಕಡೆ ಕಾರ್ಯಕ್ರಮ ಬಹುಶಃ ಈ ಅವಧಿಗೆ ಕೊನೆಯ ಕಾರ್ಯಕ್ರಮ ಆಗಬಹುದು ಎಂದರು.
ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದು ರೈತಾಪಿ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಿದರು. ಇನ್ನೂಳಿದಂತೆ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವ ಭರವಸೆಯನ್ನು ನೀಡಿದರು. ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ವಿವಿಧ ಫಲಾನುಭವಿಗಳಿಗೆ ವೃದ್ಯಾಪ್ಯ ವೇತನ,ವಿಧವಾ ವೇತನ,ಖಾತೆ ಬದಲಾವಣೆ ಸೇರಿ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ.ಶ್ರೀನಿವಾಸನ್,ರೇಷ್ಮೆ ಗೂಡು ಮಾರುಕಟ್ಟೆ ಸಹಾಯಕ ನಿರ್ದೇಶಕ ಕೃಷ್ಣಪ್ಪ,ಯಲ್ದೂರು ಹೋಬಳಿ ಆರ್.ಐ ಜನಾರ್ದನ್,ವಿನೋದ್,ಕೊಳತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೆಹರ್ ತಾಜ್, ಅಧ್ಯಕ್ಷ ಶ್ರೀನಿವಾಸ್ ಮುಖಂಡ ನಾರಯಣಗೌಡ ಮುಂತಾದವರು ಇದ್ದರು.
Breaking News
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
Saturday, April 19