- ಕೋಲಾರ ಪತ್ರಕರ್ತರ ಸಂಘದ ಸದಸ್ಯಕ್ಕೆ
- ಆಪತ್ಕಾಲದ ನಿಧಿ ಕೊಡಿಸಿ ಮಾನವೀಯತೆ ಮೆರೆದ
- ಮುಖ್ಯಮಂತ್ರಿ ಮಾಧ್ಯಮ ಸಲೆಹೆಗಾರ ಪ್ರಭಾಕರ್
ಕೋಲಾರ:ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಕರ್ತರ ಸದಸ್ಯರಿಗೆ ಆಪತ್ಕಾಲದ ವೇಳೆ ನೆರವು ನೀಡಲು ಸ್ಥಾಪಿಸಿರುವ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 25 ಲಕ್ಷ ಗಳನ್ನು ಮಂಜೂರು ಮಾಡಿದ್ದಾರೆ.
ಕೋಲಾರದಲ್ಲಿ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಪತ್ಕಾಲದ ನಿಧಿಗೆ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿತ್ತು. ಅದರಂತೆ ಕೆ.ವಿ.ಪ್ರಭಾಕರ್ ಅವರು ಜುಲೈ 3 ರಂದು ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದಾರೆ. 25 ಲಕ್ಷ ರೂಗಳನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾರ್ತಾ ಇಲಾಖೆಯ ಆಯುಕ್ತರಿಗೆ ಲಿಖಿತ ಸೂಚನೆ ನೀಡಿದ್ದು ಈಗಾಗಲೇ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯ ಪತ್ರಕರ್ತರು ಅನಾರೋಗ್ಯಕ್ಕೆ ತುತ್ತಾದಾಗ ಹಾಗೆ ಅವರ ಕುಟುಂಬದವರು ನಿಧನರಾದಾಗ ಸಂಘ ಸ್ವಯಂ ಶಕ್ತಿಯಿಂದ ಆಪತ್ಕಾಲದ ನೆರವನ್ನು ಒದಗಿಸುತ್ತಿದೆ. ಕೋವಿಡ್ ನಂತರದ ದಿನಗಳಲ್ಲಿ ಪತ್ರಕರ್ತರ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದಾಗ ಪತ್ರಕರ್ತರ ಮತ್ತು ಅವರ ಕುಟುಂಬದವರ ಆಪತ್ಕಾಲಕ್ಕೆ ಅನಕೂಲವಾಗುವಂತೆ 1 ಕೋಟಿ ರೂಗಳ ನಿಧಿಯನ್ನು ಸಂಗ್ರಹಿಸಲು ಪತ್ರಕರ್ತರ ಸಂಘವು ಮುಂದಾಗಿ ಈ ನಿಟ್ಟಿನಲ್ಲಿ ಈಗಾಗಲೇ ಸಂಘವು 3,31,055 ರೂಗಳನ್ನು ಸಂಗ್ರಹಿಸಿ ಡಿ.ಸಿ.ಸಿ ಬ್ಯಾಂಕಿನಲ್ಲಿ ಠೇವಣಿ ಇರಿಸಿದೆ. ಕೋಲಾರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಅನಕೂಲಕ್ಕಾಗಿ ಸ್ಥಾಪಿಸಿರುವ ಕಲ್ಯಾಣನಿಧಿಗೆ 25 ಲಕ್ಷ ರೂ ನೆರವು ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿ ಹಣ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತು ಹಣ ಮಂಜೂರು ಮಾಡಿಸುವಲ್ಲಿ ಆಸಕ್ತಿ ವಹಿಸಿ ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಂಡ ಧನ್ಯವಾದಗಳನ್ನು ಸಲ್ಲಿಸಿದ್ದಾರೆ