ನ್ಯೂಜ್ ಡೆಸ್ಕ್: ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ತುಮಕೂರು ಜಿಲ್ಲೆಯಲ್ಲಿ ನಡೆಸಲು ಮುಂದಾಗಿರುವ ಆಪರೇಷನ್ ಹಸ್ತಕ್ಕೆ ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಬೆಂಗಳೂರು ನಗರದ ಯಶವಂತಪುರ ಮತ್ತು ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿದ ಮೊದಲ ಹಂತದ ಆಪರೇಷನ್ ಹಸ್ತ ಯಶಸ್ವಿಯಾದ ಹಿನ್ನಲೆಯಲ್ಲಿ ಇದೀಗ ತುಮಕೂರು ಜಿಲ್ಲೆಯಲ್ಲಿ ಎರಡನೆ ಹಂತದ ಆಪರೇಷನ್ ಹಸ್ತ ನಡೆಸಲು ಮುಂದಾಗಿರುವ ಶಿವಕುಮಾರ್ ನಡೆಗೆ ತುಮಕೂರು ಪ್ರಭಾವಿ ಸಚಿವ ಕೆ.ಎನ್.ರಾಜಣ್ಣ ಮತ್ತು ಕಾಂಗ್ರೆಸ್ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅಸಮಾಧಾನ ಹೊರ ಹಾಕಿದ್ದಾರೆ. ಡಿಕೆ ಶಿವಕುಮಾರ್ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಹಾಗು ಬಿಜೆಪಿಯ ತಲಾ ಒಬ್ಬರು ಮಾಜಿ ಶಾಸಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನದಲ್ಲಿದ್ದು ಇಬ್ಬರ ಕಾಂಗ್ರೆಸ್ ಸೇರ್ಪಡಗೆ ಸಚಿವ ಕೆಎನ್ ರಾಜಣ್ಣ ಮತ್ತು ಟಿಬಿ ಜಯಚಂದ್ರ ಅಸಮಾಧಾನಗೊಂಡಿರುವ ಬಗ್ಗೆ ಕೇಳಿ ಬರುತ್ತಿದೆ. ತುಮಕೂರು ಜಿಲ್ಲೆಯ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಡಿಕೆ ಶಿವಕುಮಾರ್ ಆಪರೇಷನ್ ಹಸ್ತಕ್ಕೆ ಮುಂದಾಗಿರೋದಕ್ಕೆ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗುತ್ತಿದೆ.
ಆಪರೇಷನ್ ಹಸ್ತಕ್ಕೆ ವಿರೋಧ ಯಾಕೆ?
ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್(ಜೆಡಿಎಸ್) ಮತ್ತು ಶಿರಾ ಕ್ಷೇತ್ರದ ಮಾಜಿ ಶಾಸಕ ರಾಜೇಶಗೌಡ(ಬಿಜೆಪಿ)ರನ್ನು ಕಾಂಗ್ರೆಸ್ಗೆ ತರಲು ಡಿಕೆ ಶಿವಕುಮಾರ್ ಮುಂದಾಗಿರುವ ಬಗ್ಗೆ ಮಾತುಗಳು ಕೇಳಿ ಬಂದಿದ್ದು
ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಅಸಮಧಾನ ಹೊರ ಹಾಕಿದ್ದಾರೆ. ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆಲವು ಸಾಧಿಸಿ ಈಗ ಮಾಜಿ ಆಗಿರುವ ರಾಜೇಶ್ಗೌಡ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ ಎಂದು ಟಿ.ಬಿ.ಜಯಚಂದ್ರ ಮಾರ್ಮಿಕವಾಗಿ ಹೇಳಿದ್ದಾರಂತೆ.ಈ ಹಿಂದೆ ಕೆ.ಎನ್ ರಾಜಣ್ಣ ವಿರುದ್ಧವೇ ಡಿ.ಸಿ.ಗೌರಿಶಂಕರ್ ತೊಡೆ ತಟ್ಟಿದ್ದರು. ಇತ್ತ ಟಿ.ಬಿ.ಜಯಚಂದ್ರ ವಿರುದ್ಧ ಉಪ ಚುನಾವಣೆಯಲ್ಲಿ ರಾಜೇಶ್ ಗೌಡ ಗೆಲುವು ಸಾಧಿಸಿದ್ದರು. ಹೀಗಾಗಿಯೇ ಡಿಕೆ ಶಿವಕುಮಾರ್ ವಿರುದ್ಧ ಕೆಎನ್ ರಾಜಣ್ಣ, ಟಿಬಿ ಜಯಚಂದ್ರ ಪರೋಕ್ಷ ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂಬ ಚರ್ಚೆಗಳು ಕೇಳಿ ಬಂದಿದ್ದು ಇದರ ನಡುವೆಯೆ ಸೆಪ್ಟಂಬರ್ 21 ಅಥವಾ 22 ರಂದು ಗೌರಿಶಂಕರ್, ರಾಜೇಶ್ಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಎನ್ನುವ ಮಾತುಗಳು ಹರಿದಾಡುತ್ತಿದೆ.
ಜೆಡಿಎಸ್ ನಿಂದ ದೂರ ಸರಿಯುತ್ತಾರ ಯುವ ಶಾಸಕ ಶರಣಗೌಡ!
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಯುವ ಶಾಸಕ ಶರಣಗೌಡ ಕಂದಕೂರು ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆಗೆ ಬಂದಿರುವ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧ ಮಾಡಿ ಯಾವುದೇ ಕಾರಣಕ್ಕೂ ಈ ಮೈತ್ರಿಗೆ ತಮ್ಮ ಸಹಮತಿ ಇಲ್ಲ ಎಂದು ಹೇಳಿ ಸೆಪ್ಟೆಂಬರ್ 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಿಂದ ದೂರ ಉಳಿದಿರುತ್ತಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಯಾದಗಿರಿ ನಗರದಲ್ಲಿ ಶಾಸಕರ ಜನಸಂಪರ್ಕ ಕಚೇರಿಯ ಉದ್ಘಾಟನೆಯನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಸಣ್ಣ ಕೈಗಾರಿಕೆ ಮಂತ್ರಿ ಶರಣಬಸಪ್ಪಗೌಡ ದರ್ಶನಾಪುರ ಅವರ ಕೈಯಲ್ಲಿ ಮಾಡಿಸುವ ಮೂಲಕ ಆಪರೇಶನ್ ಹಸ್ತದ ಚರ್ಚೆಯನ್ನು ಹುಟ್ಟುಹಾಕಿದ್ದಾರೆ ಎನ್ನಲಾಗುತ್ತಿದೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Saturday, November 23