ಶಿಡ್ಲಘಟ್ಟ:ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಮಾರಕ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ.ಝೀಕಾ ವೈರಸ್ ಹರಡದಂತೆ ತಡೆಯುವ ಮುಂಜಾಗರೂಕತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳನ್ನು ಹಿಡಿದು ಅವುಗಳಲ್ಲಿ ಮಾರಣಾಂತಿಕ ವೈರಸ್ ಇದೆಯೇ ಎಂದು ತಜ್ಞರು ಪರೀಕ್ಷೆ ನಡೆಸಿದ್ದರು. ಇದರ ಅನ್ವಯ ಚಿಕ್ಕಬಳ್ಳಾಪುರ ಜಿಲ್ಲೆಯ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿತ್ತು.ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ವ್ಯಾಪ್ತಿಯಲ್ಲಿನ ಸೊಳ್ಳೆಗಳಲ್ಲಿ ಮಾರಕ ಝೀಕಾ ವೈರಸ್ ಪತ್ತೆಯಾಗಿದೆ. ಮಾರಕ ವೈರಸ್ಗಳು ಪತ್ತೆಯಾದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ವಿಶೇಷ ಸಭೆಗಳನ್ನು ನಡೆಸಿ ವೈರಸ್ ಹರಡದಂತೆ ತಡೆಯಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಿದ್ದಾರೆ.
ತಲಕಾಯಲಬೆಟ್ಟದ ಸುಮಾರು 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿರುವ ಆರೋಗ್ಯ ಸಿಬ್ಬಂದಿ 30 ಗರ್ಭಿಣಿಯರು ಮತ್ತು ಜ್ವರಪೀಡಿತ 7 ಮಂದಿ ರಕ್ತವನ್ನು ಪರೀಕ್ಷೆಗಾಗಿ ಸ್ಯಾಂಪೆಲ್ ಪಡೆದು ಬೆಂಗಳೂರಿಗೆ ಕಳುಹಿಸಿದ್ದಾರೆ.ಆರೋಗ್ಯ ಸಿಬ್ಬಂದಿ ಸ್ಥಳೀಯವಾಗಿ ಬಿಟ್ಟುಬಿಟ್ಟು ನಿಘಾ ವಹಿಸಲಾಗುತ್ತಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮನುಷ್ಯರಲ್ಲಿ ಝೀಕಾ ವೈರಸ್ ಹರಡಿಲ್ಲ ಮುನ್ನೆಚ್ಚರಿಕೆ ಕ್ರಮವಾಗಿ ತಲಕಾಯಲಬೆಟ್ಟ ವ್ಯಾಪ್ತಿಯ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜ್ವರ ಕಾಣಿಸಿಕೊಂಡರೆ ತಕ್ಷಣ ಆರೋಗ್ಯ ಸಿಬ್ಬಂದಿಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಆರೋಗ್ಯಾಧಿಕಾರಿ ಡಾ. ಮಹೇಶ್ ಕುಮಾರ್ ತಿಳಿಸಿದ್ದಾರೆ.
ಝೀಕಾ ವೈರಸ್ ಗರ್ಭಿಣಿಯರಿಗೆ ಮಾರಕ
ಝೀಕಾ ವೈರಸ್ ಸೊಳ್ಳೆಗಳಿಂದ ಹರಡುವ ಕಾಯಿಲೆಯಾಗಿದೆ. ಪ್ರಾರಂಭದಲ್ಲಿ ಸೌಮ್ಯ ಲಕ್ಷಣ ತೋರಲಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಣಾಂತಿಕ ರೋಗವಾಗಿ ಬದಲಾಗುತ್ತದೆ. ಈ ರೋಗದ ಲಕ್ಷಣಗಳು ವಾರದೊಳಗೆ ಕಣ್ಮರೆಯಾಗುತ್ತವೆ. ಗರ್ಭಿಣಿ ಸೋಂಕಿಗೆ ಒಳಗಾದಾಗ ಈ ರೋಗವು ಹುಟ್ಟಲಿರುವ ಮಗುವಿನ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತದೆ. ಹೀಗಾಗಿ ಗರ್ಭಿಣಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ರೋಗದ ಲಕ್ಷಣಗಳು
ಝೀಕಾ ವೈರಸ್ ಸೋಂಕಿಗೆ ಒಳಗಾದವರು ತುಂಬಾ ಸೌಮ್ಯವಾಗಿರುತ್ತಾರೆ.ಡೆಂಗೆ ಮತ್ತು ಚಿಕೂನ್ ಗುನ್ಯಾದಂತೆ ಇರುತ್ತದೆಯಾದರೂ ಜ್ವರ ಬರುವುದು, ಮೈಮೇಲೆ ದದ್ದರ ಏಳುವುದು,ತಲೆನೋವು,ಕೀಲುನೊವು,ಸುಸ್ತು/ಆಯಾಸ, ಕೆನ್ನೆಗಳ ಊತ, ಬೆವರುವುದು,ತಣ್ಣಗಾಗುವುದು, ವಾಂತಿ, ಕಣ್ಣುಗಳು ಕೆಂಪಾಗುವುದು ವೈರಸ್ ಲಕ್ಷಣಗಳು ಗೋಚರಿಸುತ್ತವೆ.
ಪ್ರಸ್ತುತ ಝೀಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಔಷಧ ಇಲ್ಲ. ಸದ್ಯ ಸ್ಥಳೀಯವಾಗಿ ವೈದ್ಯರು ಜ್ವರ ಕಡಿಮೆ ಆಗಲು ಮತ್ತು ವಾಂತಿ ಮತ್ತು ದದ್ದರಗಳಿಗೆ ರೋಗ ನಿರೋಧಕ ಔಷಧಗಳನ್ನು ನೀಡುತ್ತಾರೆ ಎನ್ನಲಾಗುತ್ತಿದೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Monday, November 25