ಶ್ರೀನಿವಾಸಪುರ:ಚರಂಡಿ ನೀರು ಹರಿಯುವ ವಿಚಾರದಲ್ಲಿ ಎರಡು ಕುಟುಂಬಗಳ ಕಲಹ ರಾಜಕೀಯ ಬಣ್ಣ ಪಡೆದುಕೊಂಡು ಗುಂಪು ಘರ್ಷಣೆಗೆ ಕಾರಣವಾಗಿರುವ ಘಟನೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಗೌಡತಾತನಗಡ್ಡ ಗ್ರಾಮದಲ್ಲಿ ನಡದಿರುತ್ತದೆ.
ಶ್ರೀನಿವಾಸಪುರ ತಾಲೂಕಿನಲ್ಲಿ ಬಹುತೇಕ ನಿಂತುಹೋಗಿದ್ದ ಹೊಡಿ ಬಡಿ ರಾಜಕೀಯಕ್ಕೆ ಗೌಡತಾತನಗಡ್ಡ ಗ್ರಾಮದ ಘಟನೆ ಮತ್ತೆ ನಾಂದಿ ಹಾಡುತ್ತ ಎಂಬ ಆತಂಕ ಎಲ್ಲರನ್ನು ಕಾಡುತ್ತಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಬೆಂಬಲಿಗರ ಮಧ್ಯೆ ಮಾರಾ ಮಾರಿ
ನಡೆದು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬರುತ್ತಿದೆ.ತಾಲೂಕಿನ ಗೌಡತಾತನಗಡ್ಡ ಗ್ರಾಮದಲ್ಲಿ ಮಂಗಮ್ಮ ಹಾಗು ಬಾಲಾವತಿ ಮನೆಗಳವರು ಇಬ್ಬರು ದಾಯದಿಗಳಾಗಿದ್ದು ಇತ್ತಿಚಿಗೆ ಗ್ರಾಮದಲ್ಲಿ ನಡೆದಂತ ರಾಜಕೀಯ ಸಭೆಗಳಿಂದ ಎರಡು ಕುಟುಂಬಗಳ ನಡುವೆ ವೈಮನಸ್ಯ ಏರ್ಪಟ್ಟಿದೆ ಇದು ಬೂದಿ ಮುಚ್ಚಿದ ಕೆಂಡದಾಂತೆ ಇರುವಾಗಲೆ ಮನೆ ಮುಂದೆ ಚರಂಡಿ ನೀರು ಹರಿಯುವ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಕೈ ಕೈ ಮೀಲಾಯಿಸಿಕೊಂಡಿದ್ದಾರೆ ಎರಡು ಕುಟುಂಬಗಳ ಜಗಳ ಗ್ರಾಮದ ರಾಜಕೀಯ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಗಿದೆ ಎರಡು ಕಡೆಯವರು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ.ಮಂಗಮ್ಮ ಹಾಗು ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬಾಲಾವತಿ ಕಡೆಯವರು
ತೀವ್ರವಾಗಿ ಗಾಯಗೊಂಡವರು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಎರಡು ಕಡೆಯವರು ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Friday, November 22