ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Friday, April 4