ನ್ಯೂಜ್ ಡೆಸ್ಕ್:ಎಲ್ಲವೂ ಸರಿಹೋಗಿದೆ ಎನ್ನುವಷ್ಟರಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶುರುವಾಗಿದೆ ಕಥುವಾ ಜಿಲ್ಲೆಯ ಮಚೇಡಿಯ ದಟ್ಟವಾದ ಅರಣ್ಯದ ಮಧ್ಯೆ ಸಾಗುವಂತ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಭಾರತೀಯ ಸೇನೆಯ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಜೊತೆಗೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ. ಈ ಪ್ರದೇಶವು ಭಾರತೀಯ ಸೇನೆಯ 9 ಕಾರ್ಪ್ಸ್ ಅಡಿಯಲ್ಲಿ ಬರುತ್ತದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಭಾರತೀಯ ಸೈನಿಕರು ಕೂಡ ಪ್ರತಿದಾಳಿ ನಡೆಸಿದರು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.ಸೇನೆಯ ಮೇಲೆ ದಾಳಿ ನಡೆಸುವ ಉಗ್ರರು ಅರಣ್ಯ ಪ್ರದೇಶದೊಳಗೆ ಪರಾರಿಯಾಗುತ್ತಿದ್ದು, ಉಗ್ರರ ಈ ಅಟ್ಟಹಾಸಕ್ಕೆ ಕೊನೆಯೇ ಇಲ್ಲದಂತಾಗಿದೆ.
ಕಳೆದ ಮೂರ್ನಾಲ್ಕು ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಇದುವರಿಗೂ 6 ಭಯೋತ್ಪಾದಕರು ಮೃತಪಟ್ಟಿದ್ದು ಮಚೇಡಿ-ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ಎಸೆದು ಗುಂಡಿನ ದಾಳಿ ನಡೆಸಿದಾಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದರೆ ಆದರೆ ಭಯೋತ್ಪಾದಕರು ಹತ್ತಿರದ ಕಣಿವೆಯಲ್ಲಿ ಅರಣ್ಯಕ್ಕೆ ಓಡಿಹೋದರು ಎಂಬುವುದು ಅಧಿಕಾರಿಗಳ ಮಾತು.
ಇತ್ತೀಚಿಗೆ ಸೇನಾ ಪಡೆಗಳ ಮೇಲೆ ಉಗ್ರ ದಾಳಿ ಕೃತ್ಯಗಳು ಏರಿಕೆ ಆಗುತ್ತಿದ್ದು ಇದಕ್ಕೆ ಕಾರಣ ಏನು ಎಂಬುದಾಗಿ ನಿವೃತ್ತ ಭಾರತೀಯ ಸೇನಾ ಅಧಿಕಾರಿಗಳು ಹೇಳುವಂತೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಶಾಂತವಾಗಿ ಇರಬಾರದು ಎಂಬುದೆ ಉಗ್ರರ ಧ್ಯೇಯವಾಗಿದ್ದು!
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಆರ್ಟಿಕಲ್ 370 ರದ್ದತಿ ಬಳಿಕ ಬದಲಾವಣೆಯ ಹೊಸ ಗಾಳಿ ಬೀಸಿತ್ತು. ಅಭಿವೃದ್ದಿ ಕಾರ್ಯಗಳು ಶುರುವಾಗಿದ್ದವು. ವ್ಯವಸ್ಥಿತವಾಗಿ ಕಾಶ್ಮೀರಿ ಪಂಡಿತರ ಪುನರ್ವಸತಿ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಸೇನಾ ಪಡೆಗಳು ಉಗ್ರರ ನಿಗ್ರಹದಲ್ಲಿ ಮೇಲುಗೈ ಸಾಧಿಸಿದ್ದರು. ಪ್ರವಾಸೋದ್ಯಮ ಚಟುವಟಿಕೆಗಳು ಚುರುಕಾಗಿತ್ತು. ವೈಷ್ಣೋದೇವಿ ಯಾತ್ರೆ, ಅಮರನಾಥ ಯಾತ್ರೆಗಳು ನಿರ್ವಿಘ್ನವಾಗಿ ನಡೆಯುತ್ತಿದ್ದವು. ಆದರೆ ಇದೀಗ ಇವೆಲ್ಲದರ ಮೇಲೆ ಉಗ್ರರ ಕೆಂಗಣ್ಣು ಬಿದ್ದಿದೆ. ವಲಸೆ ಕಾರ್ಮಿಕರು,ಯಾತ್ರಿಕರು ಹಾಗು ಸೇನೆಯನ್ನ ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳು ಹೆಚ್ಚಾಗುತ್ತಿವೆ. ಕಣಿವೆ ರಾಜ್ಯದಲ್ಲಿ ಶಾಂತಿಯ ವಾತಾವರಣ ಕದಡಿದೆ ಅರಾಜಕತೆ ಸೃಷ್ಟಿಸೋದೇ ಉಗ್ರರ ಮೂಲ ಉದ್ದೇಶವಾಗಿದೆ ಎಂಬ ಮಾತು ಕೇಳಿಬರುತ್ತಿದೆ.
ಚುನಾವಣೆಗಳ ಮೇಲೆ ದೃಷ್ಟಿ ಸಾರಿರುವ ಉಗ್ರರರು!
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ನಡೆದ 2024 ಲೋಕಸಭಾ ಚುನಾವಣೆಯಲ್ಲಿ ಜನತೆ ಶೇ. 58 ರಷ್ಟು ಮತದಾನಮಾಡಿದ್ದಾರೆ ಇದೊಂದು ಐತಿಹಾಸಿಕ ದಾಖಲೆ ಎನ್ನಬಹುದಾಗಿದ್ದು ಇದೇ ಹುಮ್ಮಸ್ಸಿನಲ್ಲಿ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಲು ಸಿದ್ದತೆ ಮಾಡಿಕೊಳ್ಳುತ್ತಿದೆ ಇದು ನಡೆದಿದ್ದೆ ಆದರೆ ಕಣಿವೆ ರಾಜ್ಯದಲ್ಲಿ ಶಾಶ್ವತ ಶಾಂತಿ ನೆಲೆಸಿದಂತಾಗುತ್ತದೆ ಇದನ್ನು ವಿಫಲ ಗೊಳಿಸುವ ಉದ್ದೇಶದಿಂದ ಉಗ್ರರು ಭಯದ ವಾತಾವರಣ ಸೃಷ್ಟಿಸುವಂತೆ ಮಾಡೋದು ಅವರ ಉದ್ದೇಶವಾಗಿದೆ ಎನ್ನುತ್ತಾರೆ.
ಗಡಿಯಾಚೆಯಿಂದ ಬರುವಂತ ಉಗ್ರರನ್ನು ಅವರಿಗೆ ಶಸ್ತ್ರಾಸ್ತ್ರ ಪೊರೈಸು ಹಲವಾರು ರೀತಿಯಲ್ಲಿ ಸಹಾಯ ಮಾಡುವಂತ ಹ್ಯಾಂಡ್ಲರ್ಗಳನ್ನ ಮಟ್ಟ ಹಾಕುವ ಕೆಲಸವನ್ನ ಸರ್ಕಾರ ಮಾಡ್ತಿದೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Thursday, November 21