ಶ್ರೀನಿವಾಸಪುರ:ಶ್ರೀನಿವಾಸಪುರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ಡಿ) ಅಧ್ಯಕ್ಷರಾಗಿ ದಿಂಬಾಲ ಅಶೋಕ್ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಬಾರಿಸಿದ್ದಾರೆ,ಉಪಾಧ್ಯಕ್ಷರಾಗಿ ಕೋಡಿಪಲ್ಲಿ ಸುಬ್ಬಿರೆಡ್ಡಿರವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.ಇಂದು ಮಂಗಳವಾರ ನಡೆದ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಯಾರು ಚುನಾವಣೆಗೆ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
ಪಿಎಲ್ಡಿ ಬ್ಯಾಂಕಿನಲ್ಲಿ ಹದಿನಾಲ್ಕು ಜನ ನಿರ್ದೇಶಕರು ಅವಿರೋಧವಾಗಿ ಅಯ್ಕೆಯಾಗಿದ್ದು ಮುದಿಮಡಗು ರಾಮಸ್ವಾಮಿ ನಾಮ ನಿರ್ದೇಶಕ ಸದಸ್ಯರು ಸೇರಿ ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿತರು ಅನ್ನುವುದು ವಿಶೇಷ.
ಅಧ್ಯಕ್ಷ ದಿಂಬಾಲ ಅಶೋಕ್ ಮಾತನಾಡಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಕೃಪೆಯಿಂದ ಮತ್ತೆ ಮೂರನೆ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿತುತ್ತೇನೆ,ರೈತಾಪಿ ಜನರ ಅಭಿವೃದ್ಧಿಗೆ ರಮೇಶ್ ಕುಮಾರ್ ಕಂಡಿರುವ ಕನಸು ನನಸು ಮಾಡಲು ಬ್ಯಾಂಕ್ ನಿಂದ ಸಾಲ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಮತ್ತು ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದುಕೊಂಡು ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ನಾಗದೇನಹಳ್ಳಿ ಸೀತಾರಾಮರೆಡ್ಡಿ,ವಾಸು,ರೆಡ್ಡಪ್ಪ, ನಾರಯಣಸ್ವಾಮಿ,ಲಕ್ಷ್ಮಣರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಎಲ್.ಪ್ರಕಾಶ್,ಕೃಷಿಕ ಸಮಾಜದ ಅಧ್ಯಕ್ಷ ಹೂವಳ್ಳಿಸುರೇಶ್ ಬಾಬು ಮುಂತಾದವರು ಇದ್ದರು.ಬುಧ