ಶ್ರೀನಿವಾಸಪುರ:ಶ್ರೀನಿವಾಸಪುರದ ಬಿಜೆಪಿ ಅಭ್ಯರ್ಥಿ ಗುಂಜೂರುಶ್ರೀನಿವಾಸರೆಡ್ದಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ಬಿ ಫಾರಂ ಅನ್ನು ಪಡೆದು ನಂತರ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ,ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಯಣಸ್ವಾಮಿ ಸೇರಿದಂತೆ ಸಂಘ ಪರಿವಾರ ಮೂಲದ ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್,ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್, ಕೋಲಾರದ ಸಂಸದ ಮುನಿಸ್ವಾಮಿ ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಹಾಗು ವಿಧಾನಪರಿಷತ್ ಸದಸ್ಯ ರವಿಕುಮಾರ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಭೇಟಿ ಮಾಡಿ ಕೃತಙ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ|| ವೇಣುಗೋಪಾಲ್,ತಾಲೂಕು ಅಧ್ಯಕ್ಷ ತಿಮ್ಮಸಂದ್ರಆಶೋಕರೆಡ್ಡಿ,ಕೋಲಾರ ಅಭ್ಯರ್ಥಿ ವರ್ತೂರ್ ಪ್ರಕಾಶ್ ತಾಲೂಕಿನ ಹಿರಿಯ ಮುಖಂಡ ಪೆದ್ದರೆಡ್ಡಿರಾಜೇಂದ್ರಪ್ರಸಾದ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರೆಡ್ಡಿ,ಓಭೇನಹಳ್ಳಿ ಮಂಜುನಾಥರೆಡ್ದಿ ಮುಂತಾದವರು ಇದ್ದರು.

