ನ್ಯೂಜ್ ಡೆಸ್ಕ್: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಮಯದಲ್ಲಿ ಪ್ರಧಾನಿ ಮೋದಿ ಅವರನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ.
ಬರ ಪರಿಹಾರಕ್ಕೆ ಸಂಬಂದಿಸಿದಂತೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು ಈಗ ಪ್ರಧಾನಿ ಭೇಟಿ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೊಂದಿಗೆ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ,ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳಲ್ಲಿ ಬರ ಆವರಿಸಿದೆ,196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಜಾಸ್ತಿ ಇದೆ.ಜಾನುವಾರುಗಳ ಸಂರಕ್ಷಣೆಗಾಗಿ ಸಹಕಾರ ನೀಡುವಂತೆ ಮನವಿ ಮಾಡಿರುವ ಅವರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು,ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಇದಕ್ಕಾಗಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದೆ, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾದುದ್ದು ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಕೋರಿದ್ದಾರೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Friday, November 22