- ಗ್ಯಾರೆಂಟಿಗಳಿಗೆ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ
- ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಪಂಚ ಸೂತ್ರಗಳಿಗೆ ಸಿದ್ದರಾಮಯ್ಯ ತಯಾರಿ
- ಎಷ್ಟೇ ಖರ್ಚು ಆದರೂ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದ ಸಿಎಂ
ನ್ಯೂಜ್ ಡೆಸ್ಕ್: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.ಅವರೊಂದಿಗೆ ಎಂಟು ಮಂದಿ ಪ್ರಭಾವಿ ಕಾಂಗ್ರೆಸ್ ಶಾಸಕರು ಸಹ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಪ್ರಥಮ ಎನ್ನುವಂತೆ ಪ್ರಭಾವಿ ಕಾಂಗ್ರೆಸ್ ಶಾಸಕರಾದ ಡಾ.ಪರಮೇಶ್ವರ್, ಕೋಲಾರದ ಮಾಜಿ ಸಂಸದ ಹಾಗು ಕೇಂದ್ರದ ಮಾಚಿವ ಸಚಿವ ಕೆ.ಹೆಚ್.ಮುನಿಯಪ್ಪ,ಲಿಂಗಾಯಿತ ಸಮಾಜದ ಪ್ರಭಾವಿ ಮುಖಂಡ ಎಂ.ಬಿ ಪಾಟೀಲ್ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಮಾಣ ವಚನ ಸ್ವೀಕಾರಮಾಡಿದರು.
ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕ್ರೀಶ್ಚಿಯನ್ ಸಮುದಾಯದ ಕೆ.ಜೆ.ಜಾರ್ಜ್ ಮತ್ತು ಲಿಂಗಾಯಿತ ಸಮಾಜದ ಎಂಬಿ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ ಬುದ್ದ ಬಸಣ್ಣನ ಹೇಸರುನಲ್ಲಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅಲ್ಲಾ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.
ಪ್ರಮಾಣವಚನ ಸ್ವೀಕರಿಸಿದ ಪ್ರಮುಖ ಹಾಗು ಪ್ರಭಾವಿ 8 ಸಚಿವರ ವಿವರ
ಎಂ. ಬಿ. ಪಾಟೀಲ್ (ಲಿಂಗಾಯತ)
ಡಾ. ಜಿ. ಪರಮೇಶ್ವರ್ (ದಲಿತ ಬಲ)
ಪ್ರಿಯಾಂಕ ಖರ್ಗೆ (ದಲಿತ ಬಲ)
ಕೆ.ಎಚ್. ಮುನಿಯಪ್ಪ (ದಲಿತ ಎಡ)
ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)
ಮೊದಲ ಸಚಿವ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ ಸಿದ್ದರಾಮಯ್ಯ
ಪ್ರಮಾಣವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.
ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ಪಂಚ ಸೂತ್ರ
ಈಗಿನ ಬಜೆಟ್ ಗಾತ್ರವನ್ನು 3.10 ಲಕ್ಷ ಕೋಟಿ ರೂ.ನಿಂದ 3.25 ಲಕ್ಷ ಕೋಟಿ ರೂ.ಗೆ ಹೆಚ್ಚಿಸುತ್ತೇವೆ. ತೆರಿಗೆ ಕಟ್ಟು ನಿಟ್ಟಾಗಿ ವಸೂಲಿ ಮಾಡಿ ಈ ಹೆಚ್ಚಿನ 15,000 ಕೋಟಿ ರೂ. ತೆರಿಗೆ ಸಂಗ್ರಹಿಸುತ್ತೇವೆ. ಅನಗತ್ಯ ವೆಚ್ಚಗಳನ್ನು ತಡೆಯುತ್ತೇವೆ. ಸಾಲ ಕಡಿಮೆ ಮಾಡುವುದರಿಂದ ಕಟ್ಟಬೇಕಾದ ಅಸಲು ಕಡಿಮೆಯಾಗುತ್ತದೆ.ಐದು ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕಟ್ಟುನಿಟ್ಟಾದ ತೆರಿಗೆ ಸಂಗ್ರಹ ಮೂಲಕ ನಾವು ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳುತ್ತೇವೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದ್ದು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ದೂರಿದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು,ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ್ದರು. ಈ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇ ಆದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಯಾವುದೇ ಆರ್ಥಿಕ ದಿವಾಳಿ ಆಗದಂತೆ ಸುರಕ್ಷಿತವಾಗಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು.