- ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಟೆಸ್ಟಿಂಗ್ ಕೇಂದ್ರ
- ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ.
- ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿನ ಸ್ಥಿತಿಗತಿ ಸಿದ್ಧತೆಗಳ ಅವಲೋಕನ.
ನ್ಯೂಜ್ ಡೆಸ್ಕ್:ಜನರಿಂದ ದೂರವಾಗಿದ್ದ ಕೊರೋನಾ ಮತ್ತೆ ವಕ್ಕರಿಸಿದ್ದು ಈಗ ತನ್ನ ಆರ್ಭಟ ಶುರು ಮಾಡಿಕೊಂಡಿದೆ.ರಾಜ್ಯದಲ್ಲಿ 20 ಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಮೂರು ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 22 ಕ್ಕೂ ಹೆಚ್ಚು ಮಂದಿಗೆ ಕೊರೋನಾ ಪಾಸಿಟಿವ್ ಇರುವ ಬಗ್ಗೆ ವರದಿಯಾಗಿದೆ, ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಈ ಪೈಕಿ 72 ಮಂದಿ ಹೋಮ್ ಐಸೋಲೇಷನ್ನಲ್ಲಿ ಇರಲು ಸೂಚಿಸಲಾಗಿದ್ದು 20 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ 7 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕೇರಳದಲ್ಲಿ ಕೋವಿಡ್-19 ಜೆಎನ್-1 ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಅಗ್ಗಿಂದ್ದಾಗೆ ಮಾರ್ಗಸೂಚಿಗಳನ್ನು ಪ್ರಕಟಿಸುತ್ತಿದೆ.
ಕೇರಳ ಆಂಧ್ರ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಔಷಧ, ಆಕ್ಸಿಜನ್, ಬೆಡ್ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು.ಕೊವಿಡ್ ಟೆಸ್ಟ್ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ.
ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ
ರಾಜ್ಯದಲ್ಲಿ ಕೋವಿಡ್ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕೆಎಲ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸುವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಖಡ್ದಾಯವಾಗಿ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದ್ದಾರೆ.
ಕೇರಳದಲ್ಲಿ ಕೋವಿಡ್ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಕೆಎಸ್ಆರ್ಟಿಸಿ ಫುಲ್ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಶ್ರೀನಿವಾಸಪುರದಲ್ಲೂ ಅಲರ್ಟ್
ಕೊರೋನಾ ವಿಚಾರದಲ್ಲಿ ಆರೋಗ್ಯ ಇಲಾಖೆ ಶ್ರೀನಿವಾಸಪುರದಲ್ಲೂ ತೀವ್ರವಾಗಿ ಪರಿಗಣಿಸಿದ್ದು ಅಗತ್ಯ ಸಲಕರಣೆಗಳು ಬಂದ ತಕ್ಷನ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಆರಂಭಿಸುವುದಾಗಿ ತಾಲೂಕು ವೈಧ್ಯಾದಿಕಾರಿ ಡಾ.ಷರಿಫ್ ತಿಳಿಸಿದ್ದಾರೆ.ಬೂಸ್ಟರ್ ಡೊಸ್ ನೀಡಲು ಅಗತ್ಯ ವ್ಯಾಕ್ಸಿನ್ ಬರಬೇಕಿದೆ ಎನ್ನುತ್ತಾರೆ.