- ಕೊರೋನಾ ಹೊಸ ರೂಪಾಂತರಿ JN.1
- ಶೀತ, ಜ್ವರ ಕೆಮ್ಮು ಇದ್ದವರು ಕೊರೊನಾ ಪರೀಕ್ಷೆ
- ಕೇರಳದಲ್ಲಿ ಅತಿ ಹೆಚ್ಚು ಸಕ್ರಿಯಾ
ನ್ಯೂಜ್ ಡೆಸ್ಕ್:ಭಾರತದಲ್ಲಿ ಕೋವಿಡ್ 19 ಸಕ್ರಿಯವಾಗಿದ್ದು, ನೂತನ ರೂಪಾಂತರಿ JN.1 ವೈರಸ್ನಿಂದ ಕೇರಳದಲ್ಲಿ ಒಬ್ಬರು ಮೃತಪಟ್ಟು ಕೊರೋನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರಲ್ಲೂ ಆತಂಕ ಸೃಷ್ಟಿಸಿದೆ. ಕೆರಳದಲ್ಲಿ ಕೊರೋನಾ ದಿಂದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ದೃಢಪಡಿಸಿದೆ.ಇದರಿಂದ ದೇಶದ ಜನರು ಆತಂಕಗೊಂಡಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗಿದೆ. ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಮೊದಲ ಕೊರೋನಾ ಕೇಸ್ ಪತ್ತೆಯಾಗಿದೆ.ಮಂಡ್ಯ ಜಿಲ್ಲೆಯ ಮದ್ದೂರಿನ ವೃದ್ಧರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾದ ಬಳಿಕ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ನಿವಾಸಿ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ಸೋಂಕು ಲಕ್ಷಣಗಳು ಇರುವುದು ದೃಢಪಟ್ಟಿದೆ.
ಇಂದು ನಡೆಸಲಾದ ರ್ಯಾಂಡಮ್ ಟೆಸ್ಟ್ ನಲ್ಲಿ ಅಮೃತ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕೊರೋನಾ ಸೋಂಕು ಬಂದಿರುವುದು ದೃಢವಾಗಿದೆ ಎಂದು ರಾಮನಗರ ಜಿಲ್ಲೆ ಆರೋಗ್ಯ ಇಲಾಖೆ ಅಧಿಕಾರಿ ಕಾಂತರಾಜು ತಿಳಿಸಿದ್ದಾರೆ.ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲ ಕೇಸ್ ಪತ್ತೆಯಾಗಿದ್ದು ಇತ ತಿಮ್ಮೆಗೌಡನದೊಡ್ಡಿ ಬಳಿ ಇರುವ ಅಮೃತ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುತ್ತಾನೆ.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿ
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ರಾಜ್ಯ ಸರ್ಕಾರದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಜನರಿಗೆ ಕರೆ ಇತ್ತಿದ್ದಾರೆ.
ಕೇರಳದಲ್ಲಿ ಹೆಚ್ಚು ಸಕ್ರಿಯವಾಗುತ್ತಿರುವ ಹೊಸ ರೂಪಾಂತರಿ ಕೊರೋನಾ ವೈರಸ್ ಬಗ್ಗೆ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದ್ದು ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೊರೋನಾ ಪಾಸಿಟಿವ್ ಹೆಚ್ಚು ಬಂದರೆ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮಾಸ್ಕ್ ಕಡ್ಡಾಯ!
60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವಂತವರು,ಉಸಿರಾಟದ ಸಮಸ್ಯೆ ಇರುವವರು ಖಡ್ದಾಯವಾಗಿ ಮಾಸ್ಕ್ ಧರಿಸುವಂತೆ ಸಮಿತಿ ಸಲಹೆ ನೀಡಿದ್ದು ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು.
ಕೇರಳದಲ್ಲಿ ಕರೋನಾ ಹೆಚ್ಚು ಸಕ್ರಿಯವಾಗಿರುವ ಹಿನ್ನಲೆಯಲ್ಲಿ ಶಬರಿಮಲೆ ಭಕ್ತರು ಈ ಬಗ್ಗೆ ಜಾಗ್ರತರಾಗಬೇಕು ಎಂದು ವೈದ್ಯಕೀಯ ಕ್ಷೇತ್ರದವರ ಮಾತು.