- ರಾಜ್ಯದಲ್ಲಿ ಇಂದು ಸುಮಾರು 15 ಸಾವಿರ ಕೊರೋನಾ ಪ್ರಕರಣಗಳು ಪತ್ತೇಯಾಗಿವೆ
- ಬೆಂಗಳುರಿನಲ್ಲೇ 10 ಸಾವಿರ ಸೋಂಕಿತರು
- ಕೋಲಾರ ಜಿಲ್ಲೆಯಲ್ಲಿ 104 ಪ್ರಕರಣಗಳು
- ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 89 ಸೋಂಕಿತರು
ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 14,738 ಪ್ರಕರಣಗಳು ದಾಖಲಾಗಿದ್ದು, ಇದು ಹಿಂದಿನ ದಾಖಲೆಗಳನ್ನು ಮೀರಿಸಿದೆ.
ಬೆಂಗಳೂರು:-ಎರಡನೇ ಅಲೆ ಕೊರೋನಾ ಸೋಂಕಿಗೆ ರಾಜ್ಯ ತತ್ತರಿಸಿ ಹೋಗಿದೆ.ದಿನದಿಂದ ದಿನಕ್ಕೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಇಂದು ಏ 15 ಗುರುವಾರ ದಾಖಲೆ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ. ಈ ವರ್ಷದಲ್ಲಿ ಇಷ್ಟೊಂದು ಪ್ರಮಾಣ. ಹಿಂದಿನ ದಾಖಲೆಗಳನ್ನು ಮೀರಿಸಿದೆ. ಅಲ್ಲದೇ ಒಂದೇ ದಿನದಲ್ಲಿ 66ಜನರು ಸೋಂಕಿಗೆ ಮೃತಪಟ್ಟಿರುತ್ತಾರೆ ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಸೋಂಕು ಹರಡುತ್ತಿದ್ದು ಇಂದು 10.497 ಕೇಸ್ ಪತ್ತೆಯಾಗಿದೆ ಬೆಂಗಳೂರಿನಲ್ಲಿ 30 ಮಂದಿ ಸಾವನ್ನಪ್ಪಿರುತ್ತಾರೆ,ರಾಜ್ಯದಲ್ಲಿ ಇಂದು 3591 ಮಂದಿ ಇಂದು ಗುಣಮುಖರಾಗಿ ಡಿಸ್ವಾರ್ಜ್ ಆದರೆ, ಇನ್ನೂ 555 ಮಂದಿಗೆ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ಹಾಸಿಗೆ
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 400 ಕ್ಕೂ ಹೆಚ್ಚು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಗೆ ನೀಡಿದೆ. ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯನ್ನು ಹಾಗೂ ಐಎಲ್ಐ ಗೆ ಮೀಸಲಿಡಲು ತೀರ್ಮಾನಿಸಲಾಗಿದೆ. ವಿಕ್ಟೋರಿಯಾದಲ್ಲಿ 300 ಹಾಸಿಗೆ ಕೋವಿಡ್ ಮೀಸಲಿದ್ದು, ಎರಡು ದಿನದೊಳಗೆ 500 ಕ್ಕೆ ಏರಿಸಲು ಸೂಚಿಸಲಾಗಿದೆ. ಬೌರಿಂಗ್ ನಲ್ಲಿ 300 ಹಾಸಿಗೆ, ಚರಕ ಆಸ್ಪತ್ರೆಯಲ್ಲಿ ಎರಡು ದಿನದೊಳಗೆ 150 ಹಾಸಿಗೆ, ಘೋಷಾ ಆಸ್ಪತ್ರೆಯಲ್ಲಿ 100 ಹಾಸಿಗೆ, ಕೆ.ಸಿ.ಜನರಲ್ ನಲ್ಲಿ 100 ಹಾಸಿಗೆ ಕೋವಿಡ್ ಗೆ ಮೀಸಲಿಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.