ಕೋಲಾರ : ಕೋಲಾರ ಜಿಲ್ಲೆಯಾದ್ಯಂತ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಕಠಣ ಕ್ರಮಕ್ಕೆ ಸೂಚಿಸಿದ್ದಾರೆ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವವರ ವಿರುದ್ಧ ಕಾಯ್ದೆಯನುಸಾರ ಕ್ರಮ ತಗೆದುಕೊಳ್ಳಲು ಪ್ರತಿ ತಾಲ್ಲೂಕುವಾರು ಸಮಿತಿ ರಚಿಸಲು ಸೂಚಿಸಿದ್ದಾರೆ.
ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಉಪಯೋಗಿಸುವ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಕ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಅಂತವರ ವಿರುದ್ಧ ದಂಡ ಹಾಗೂ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕೆಂದು ಸಂಬಂಧಪಟ್ಟ ಪುರಸಭೆ ಪಟ್ಟಣಪಂಚಾಯಿತಿ ನಗರ ಸಭೆಗಳು ಹಾಗು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಡಳಿತ ವತಿಯಿಂದ ಸಾರ್ವಜನಿಕರೆಗೆ ಹೆಚ್ಚಿನ ರೀತಿಯಲ್ಲಿ ತಲುಪುವ ಹಾಗೆ ಜಾಗೃತಿ ಫಲಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಬೇಕು ಹಾಗೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಜಿಲ್ಲೆಗೆ ಬಾರದಂತೆ ತಡೆಯಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾರಿಗೆ ಇಲಾಖೆ ಯವರು ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.