ಕೋಲಾರ: ಕೋಲಾರ-ಚಿಕ್ಕಬಳ್ಳಾಪುರದ ಹಾಲು ಒಕ್ಕೂಟದ ಅಧ್ಯಕ್ಷ ಹಾಗು ನಿರ್ದೇಶಕರ ಮನೆಗಳ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ( ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಹಾಲು ಒಕ್ಕೂಟದ ಅಧ್ಯಕ್ಷ ಹಾಗು ಮಾಲೂರು ಶಾಸಕ ನಂಜೇಗೌಡ ಅವರಿಗೆ ಸೇರಿದ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದ ಮನೆಯಲ್ಲಿ ಶೋಧ,ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ನಲ್ಲಿ ಹಾಗು ಶಾಸಕರ ಬೆಂಗಳೂರಿನ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದಾರೆ.
ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಹಿನ್ನೆಲೆ ದಾಳಿಯಾಗಿದೆ ಎಂದು ಶಂಕಿಸಲಾಗುತ್ತಿದ್ದು ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್ ಅವರ ದೊಡ್ಡಮಲ್ಲೆ ಗ್ರಾಮದ ಮನೆ,ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ(MD) ಗೋಪಾಲ್ ಮೂರ್ತಿ ಅವರ ಮನೆ, ಕೋಚಿಮುಲ್ ಆಡಳಿತಾತ್ಮಕ ನಿರ್ದೇಶಕ ನಾಗೇಶ್ ಅವರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ, ಮಾಲೂರು ಕೋಚಿಮುಲ್ ಕಚೇರಿ,ಚಿಂತಾಮಣಿ ತಾಲೂಕಿನ ನಿರ್ದೇಶಕ ಅಶ್ವಥನಾರಯಣಬಾಬು ಅವರ ಚಿಂತಾಮಣಿಯ ಪ್ರಭಾಕರ ಬಡಾವಣೆ ಮನೆ ಸೇರಿದಂತೆ 10 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ಮಾಡಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರದ ಹಾಲು ಒಕ್ಕೂಟದ ಸಿಬ್ಬಂದಿ ನೇಮಕಾತಿ ವಿಚಾರದಲ್ಲಿ ಅಕ್ರಮ ಆಗಿದೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು ಅಲ್ಲದೆ ಅಂತಿಮ ನೇಮಕಾತಿ ಆದೇಶದ ಪಟ್ಟಿ ಪ್ರಕಟವಾಗುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ನೇಮಕಾತಿ ಪಟ್ಟಿಯ ಪ್ರತಿ ಹರಿದಾಡಿತ್ತು ಅದರಲ್ಲೂ ಅಭ್ಯರ್ಥಿಗಳ ಹೆಸರಿನ ಮುಂದೆ ಶಿಪಾರಸು ಮಾಡಿದ ಮುಖಂಡರ ಹೆಸರೂ ನಮೂದಿಸಲಾಗಿತ್ತು ಇದು ಹಲವರ ಅಸಾಮಾಧಾನಕ್ಕೆ ಕಾರಣ ಆಗಿತ್ತು ಇದರ ನಡುವೆ ಇಂದು ಇಡಿ ದಾಳಿ ನಡೆದಿದೆ ಸ್ಪಷ್ಟ ಮಾಹಿತಿ ಯಾರಿಗೂ ಇಲ್ಲ ಎನ್ನಲಾಗುತ್ತಿದೆ.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Saturday, April 5