ಬೆಂಗಳೂರು:ರಾಜಕೀಯ ಚುನುವಾಣೆಗಷ್ಟೆ ಮೀಸಲು ಉಳಿದಂತೆ ನಂಟಸ್ಥನ ಮಾಡಲು ರಾಜಕೀಯ ಪಕ್ಷಗಳ ಮುಖಂಡರ ನಡುವಿನ ಪಕ್ಷ ರಾಜಕೀಯ ಅಡ್ಡಿಯಾಗಲಾರದು ಎಂಬುದಕ್ಕೆ ಬೇರೆ-ಬೇರೆ ಪಕ್ಷಗಳಲ್ಲಿ ಇರುವಂತ ಕರ್ನಾಟಕದ ಬಹಳಷ್ಟು ರಾಜಕಾರಣಿಗಳು ನಂಟಸ್ಥನ ಬೆಳೆಸಿಕೊಂಡಿದ್ದಾರೆ ಆ ಸಾಲಿಗೆ ಈಗ ಹೊಸ ಸೇರ್ಪಡೆ ಕೋಲಾರದ ಉಸ್ತುವಾರಿ ಸಚಿವ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾನಸ ಪುತ್ರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗು ಬಿಜೆಪಿ ಪಕ್ಷದ ಪ್ರಭಾವಿ ಮುಖಂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪರಮಾಪ್ತ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಆರ್. ವಿಶ್ವನಾಥ್ ನಂಟರಾತ್ತಿದ್ದಾರೆ.
ಎಸ್. ಆರ್. ವಿಶ್ವನಾಥ್ ಅವರ ಪುತ್ರಿ ಅಪೂರ್ವ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಪುತ್ರ ಸಂಜಯ್ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರು ನಗರದ ಖಾಸಗಿ ಹೋಟೆಲ್ನಲ್ಲಿ ಇಂದು ನಡೆಯಿತು.ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಬಹುತೇಕ ಸಚಿವರು,ಶಾಸಕರು ಹಲವಾರು ರಾಜಕೀಯ ನಾಯಕರು,ಗಣ್ಯರು ಹಾಗು ವಿಶೇಷವಾಗಿ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ಶಾಸಕ ಹಾಗು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸಹ ಭಾಗಿಯಾಗಿ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ.
ಇದೊಂದು ಲವ್ ಕಮ್ ಅರೇಂಜ್ ಮ್ಯಾರೇಜ್ ಎಂದು ಎರಡು ಕುಟುಂಬದವರು ಹೇಳಿದ್ದಾರೆ,ಕೆಲವು ದಿನಗಳ ಹಿಂದೆ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಸ್. ಆರ್. ವಿಶ್ವನಾಥ್ ಮಾತನಾಡಿ ನನ್ನ ಆತ್ಮೀಯರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ನಾನು ಸಂಬಂಧಿಕರಾಗುತ್ತಿದ್ದೇವೆ. ನನ್ನ ಪುತ್ರಿ ಭೈರತಿ ಸುರೇಶ್ ಪುತ್ರನ ಜೊತೆ ವಿವಾಹವಾಗುತ್ತಿದ್ದಾರೆ ಎಂದು ಘೋಷಣೆ ಮಾಡಿದ್ದರು.