ನ್ಯೂಜ್ ಡೆಸ್ಕ್:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ 350 ಅಡಿ ಆಳದ ಕಂದಕಕ್ಕೆ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದಾರೆ. 18 ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನ ಮೆಂಧರ್ನ ಬಲ್ನೋಯಿ ಕಣಿವೆ ಪ್ರದೇಶದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದ್ದು ಹಲವು ಯೋಧರು ಗಾಯಗೊಂಡಿರುವುದಾಗಿ ಹೇಳಲಾಗಿದೆ. 11 ಮದ್ರಾಸ್ ಲೈಟ್ ಇನ್ಫೆಂಟ್ರಿ (11 MLI) ಗೆ ಸೇರಿದ ಸೇನಾ ವಾಹನ ಎಂದು ಗುರುತಿಸಲಾಗಿದೆ ವಾಹನವು ನೀಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್ಗೆ ಹೊರಡುತ್ತಿದ್ದಾಗ ಮಾರ್ಗಮಧ್ಯದಲ್ಲಿ ಈ ಘಟನೆ ನಡೆದಿದೆ. 11 MLI ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು ವೈಟ್ ನೈಟ್ ಕಾರ್ಪ್ಸ್ ಸೈನಿಕರ ಸಾವಿಗೆ ಸಂತಾಪ ಸೂಚಿಸಿದೆ.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Thursday, April 3