ಶ್ರೀನಿವಾಸಪುರ:ಶ್ರೀನಿವಾಸಪುರ ತಾಲ್ಲೂಕು ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ನಾಗೇಶ್ ರೆಡ್ಡಿ ರಾಜಿನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದು ಕಲ್ಲೂರು ಗ್ರಾಮಪಂಚಾಯಿತಿ ಸದಸ್ಯ ಶಂಕರರೆಡ್ಡಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿಯಲ್ಲಿ ಒಟ್ಟು 17 ಸದಸ್ಯರಿದ್ದು ಜೆಡಿಎಸ್ 13 ಹಾಗು ಕಾಂಗ್ರೇಸ್ 4 ಸದಸ್ಯರಿದ್ದು ಜೆಡಿಎಸ್ ಅಭ್ಯರ್ಥಿಯಾಗಿ ಬೆಂಗಳೂರಿನ ಉದ್ಯಮಿ ಶಂಕರರೆಡ್ಡಿ ಜೆಡಿಎಸ್ ಹಾಗು ಕಟಾರಮುದ್ದಲಪಲ್ಲಿ ಸದಸ್ಯೆ ಬಂಡಾಯ ಜೆಡಿಎಸ್ ಅಭ್ಯರ್ಥಿಯಾಗಿ ರತ್ನಮ್ಮ ನಾಮಪತ್ರ ಸಲ್ಲಿಸಿದ್ದರು.ಕೊನೆಯ ಹಂತದವರಿಗೂ ಇಬ್ಬರಲ್ಲಿ ಯಾರಬ್ಬರೂ ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ಅಧಿಕಾರಿ ರಾಜೇಶ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಿಸಿದರು ನಂತರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಗೌಪ್ಯ ಮತದಾನ ನಡೆಸಲಾಗಿ ಜೆಡಿಎಸ್ ಬಂಡಾಯ ಅಭ್ಯರ್ಥಿ ರತ್ನಮ್ಮ 6 ಮತಗಳನ್ನು ಜೆಡಿಎಸ್ ಶಂಕರ್ ರೆಡ್ಡಿ 10 ಮತಗಳನ್ನು ಪಡೆದು ಜಯಶೀಲರಾಗಿರುತ್ತಾರೆ.ಅಭಿವೃದ್ಧಿಗೆ ಆದ್ಯತೆ ನೂತನವಾಗಿ ಅಧ್ಯಕ್ಷರಾದ ಶಂಕರ್ ರೆಡ್ಡಿ ಮಾತನಾಡಿ ಪಂಚಾಯಿತಿ ಅಭಿವೃದ್ಧಿಗೆ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತೆನೆ.ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆ ನೀಡುವ ಮೂಲಕ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.