ಸಿಎಂ ಸಿದ್ದರಾಮಯ್ಯರೊಂದಿಗೆ ಮಾತನಾಡಿದ್ದು ಸಂಕ್ರಾಂತಿ ಹಬ್ಬದ ನಂತರ ಸಮಸ್ಯೆ ಬಗೆಹರಿಯಲಿದೆ ಎಂದ ಸಚಿವ ರಾಮಲಿಂಗಾರೆಡ್ಡಿ.
ಬೆಂಗಳೂರು:ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯರೊಂದಿಗೆ ಮಾತುಕತೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31 ರಂದು ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆಯಲು ನಿರ್ಧರಿಸಿವೆ. ಸಭೆಯಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗಿಯಾಗಿದ್ದು ಈ ಸಂದರ್ಭದಲ್ಲಿ ಸಾರಿಗೆ ಸಿಬ್ಬಂದಿ ಬೇಡಿಕೆ ಕುರಿತಾಗಿ ಸಿಎಂ ಅವರಿಗೆ ಮನವರಿಕೆ ಮಾಡಲಾಗಿವುದಾಗಿ ತಿಳಿಸಿದ್ದು ಸಂಕ್ರಾಂತಿ ನಂತರ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ಧು ಸಭೆ ನಡೆಸಲಿದ್ದಾರಂತೆ ಈ ಕಾರಣಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರ ವಾಪಸ್ ಪಡೆದು ಡಿಸೆಂಬರ್ 31 ರಂದು ಸಾರಿಗೆ ಸಂಸ್ಥೆ ಬಸ್ ಗಳು ಎಂದಿನಂತೆ ಕಾರ್ಯಾಚರಣೆ ನಡೆಸಲಿವೆ ಎಂದಿರುತ್ತಾರೆ.