- ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ
- ಸಿಸಿಟಿವಿಯಲ್ಲಿ ಸೆರೆಯಾದ ಚಿರತೆ ಓಡಾಟ
- ಕ್ಯಾಂಪಸ್ ಪ್ರದೇಶದಲ್ಲಿ ಭಯದ ವಾತಾವರಣ
- ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್
ನ್ಯೂಜ್ ಡೆಸ್ಕ್:ಅರಮನೆ ನಗರಿ ಮಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿ ಸಂಚಲನ ಮೂಡಿಸಿದೆ. ಇದರಿಂದಾಗಿ ಡಿ.31 ರಿಂದ ಕಂಪನಿಯು ಉದ್ಯೋಗಿಗಳಿಗೆ work from Home ಮನೆಯಿಂದಲೇ ಕೆಲಸ ಮಾಡುವಂತೆ ಸಂದೇಶ ಕಳುಹಿಸಿದೆ. ಮಂಗಳವಾರ ಬೆಳಗ್ಗೆ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆಯ ಚಲನವಲನ ಕ್ಯಾಂಪಸ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಸುರಕ್ಷತೆ ದೃಷ್ಟಿಯಿಂದ ಹೊರಗಿನಿಂದ ಯಾರನ್ನೂ ಕ್ಯಾಂಪಸ್ಗೆ ಒಳಗೆ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿ ನಿಘಾ ವಹಿಸಿದ್ದು ಕ್ಯಾಂಪಸ್ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಅರಣ್ಯ ಸಿಬ್ಬಂದಿ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಆದರೆ ಇನ್ನೂ ಚಿರತೆ ಪತ್ತೆಯಾಗಿಲ್ಲ ಎಂದು ಕಾರ್ಯಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಚರಣೆ
ಮೈಸೂರಿನ ಹೆಬ್ಬಾಳ ಕೈಗಾರಿಕ ಪ್ರದೇಶದಲ್ಲಿನ ಇನ್ಫೋಸಿಸ್ ಆವರಣದಲ್ಲಿ ಮಂಗಳವಾರ ಮುಂಜಾನೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬೀದರ್ನಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಮೈಸೂರಿಗೆ ಕಳುಹಿಸಲಾಗಿದೆ.ತಂಡದಲ್ಲಿ ಪಶುವೈದ್ಯರು ಹಾಗು ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯ ಅಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಮೈಸೂರು ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟು ವಿಶಾಲವಾಗಿದ್ದು ಕೆಲವೊಂದು ಕಡೆ ಕಾಡಿನಂತೆ ದಟ್ಟವಾದ ಪೊದೆಗಳು ಇದ್ದು ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ಮಾಡಲಾಗುತ್ತಿದೆ ಚಿರತೆ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.