ಶ್ರೀನಿವಾಸಪುರ:ರಾಜ್ಯದಲ್ಲಿರುವ ಆಡಳಿತ ರೂಡ ಬಿಜೆಪಿ ಸರ್ಕಾರ ದಲಿತ ಸಮುದಾಯಗಳಿಗೆ ನ್ಯಾಯೋಚಿತವಾದ ಮೀಸಲಾತಿ ಜಾರಿಮಾಡಲು ಉಪ ಸಮಿತಿ ರಚಿಸಿ ಚುನಾವಣೆ ಗಿಮಿಕ್ ಮಾಡುತ್ತಿದೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್ ಆರೋಪಿಸಿದರು.
ಅವರು ಮಾದಿಗ ದಂಡೋರ ಮೀಸಲಾತಿ ಹೊರಾಟ ಸಮಿತಿ ಶ್ರೀನಿವಾಸಪುರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಪಾಲ್ಗೋಂಡಿದ್ದ ಅವರು ದಲಿತ ಸಮುದಾಯಗಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಡವಳಿಕೆಗಳ ವಿರುದ್ದ ಕಿಡಿ ಕಾರಿದರು,ಸರ್ಕಾರ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಉಪ ಸಮಿತಿ ರಚನೆ ಮಾಡಿ ಅದಕ್ಕೆ ಕಾನೂನು ಮಂತ್ರಿ ಮಾಧುಸ್ವಾಮಿಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವ ಬಿಜೆಪಿ ಸರ್ಕಾರ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವಂತ ಕೆಲಸವನ್ನು ವ್ಯವಸ್ಥಿತವಾಗಿ ಮಾಡುವಲ್ಲಿ ಮುಂದಾಗಿದೆ ಎಂದು ದೂರಿದರು ಸಮುದಾಯಕ್ಕೆ ಅನ್ಯಾಯ ಮಾಡದೆ ಚಳಿಗಾಲ ಅಧಿವೇಶನದಲ್ಲಿ ಮೊದಲ ದಿನವೆ ಸದಾಶಿವ ಆಯೋಗ ವರದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು.
ಸರ್ಕಾರ ಈ ಬಗ್ಗೆ ಮುಂದಾಗದಿದ್ದರೆ ಮಾದಿಗ ಸಮುದಾಯದ ಹೋರಾಟ ತೀವ್ರವಾಗುತ್ತದೆ ಈ ತಿಂಗಳ 27 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲಾಗುವುದು ಪ್ರತಿಭಟನೆಗೆ ಅಡ್ಡಿಪಡಿಸಿದರೆ ಮುಂದಿನ ಚುನಾವಣೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ಜನವರಿ 6 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಮಾರ್ಗದರ್ಶನದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ನಾವು ತಿರ್ಮಾನ ತಗೆದುಕೊಳ್ಳುತ್ತೆವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡ ಜಿ.ಶಂಕರ್ ಅವಲಕುಪ್ಪ, ರಾಜ್ಯ ಗೌರವ ಅಧ್ಯಕ್ಷ ಕೋಲಾರರವಿ,ಸಂಘಟನಾ ಕಾರ್ಯದರ್ಶಿ ಮುಳಬಾಗಿಲು ನಾಗರಾಜ್, ಮುಂತಾದವರು ಇದ್ದರು.
ತಾಲೂಕು ನೂತನ ಪದಾಧಿಕಾರಿಗಳಾಗಿ ಗೌ.ಅಧ್ಯಕ್ಷ ಕೆಂಚಪ್ಪ,ಅಧ್ಯಕ್ಷರಾಗಿ ದೇವಲಪಲ್ಲಿ ರವಿಕುಮಾರ್,ಪ್ರಧಾನಕಾರ್ಯದರ್ಶಿ ನಾರಮಾಕಲಹಳ್ಳಿ ಚಂದ್ರಪ್ಪ,ಕಾರ್ಯದರ್ಶಿ ಅನಿಲ್ ಕುಮಾರ್, ಯುವ ಘಟಕಕ್ಕೆ ಕಲ್ಯಾಣ್ ಹಾಗು ಮಹಿಳಾ ಘಟಕದ ಪದಾಧಿಕಾರಿಗಳಾಗಿ ಗೌ.ಅಧ್ಯಕ್ಷರಾಗಿ ವೆಂಕಟಲಕ್ಷ್ಮಮ್ಮ,ಅಧ್ಯಕ್ಷರಾಗಿ ವರಲಕ್ಷ್ಮೀ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪ ಆಯ್ಕೆಯಾಗಿರುತ್ತಾರೆ.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Saturday, November 23