ಶ್ರೀನಿವಾಸಪುರ:ಫಸಲ್ ಭೀಮಾ ಯೋಜನೆಯಲ್ಲಿ ಎಚ್ ಡಿ ಎಫ್ ಸಿ ಇರುಗೊ ಬೆಳೆ ವಿಮಾ ಸಂಸ್ಥೆ ಬೆಳೆ ನಷ್ಟದ ಪರಿಹಾರ ವಿತರಿಸದೆ ಮಾವು ಬೆಳೆಗಾರರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಡಿಸೆಂಬರ್8 ರಂದು ಗುರುವಾರ ಶ್ರೀನಿವಾಸಪುರ ತಾಲೂಕು ಬಂದ್ ಮಾಡಲಾಗುವುದು ಎಂದು ಕೋಲಾರ ಜಿಲ್ಲಾ ಮಾವು ಬೆಳೆಗಾರ ಸಂಘದ ಅಧ್ಯಕ್ಷ ನಿಲಟೂರುಚಿನ್ನಪ್ಪರೆಡ್ಡಿ ಹೇಳಿದರು ಅವರು ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾಮಟ್ಟದ ವಿಸ್ತೃತ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿ ಶ್ರೀನಿವಾಸಪುರ ಬಂದ್ ಬೆಂಬಲಿಸಲು ಡಿಸೆಂಬರ್8 ರಂದು ಕೋಲಾರ ಜಿಲ್ಲೆಯ 5 ತಾಲೂಕು ಕೇಂದ್ರಗಳಲ್ಲಿ ಮಾವು ಬೆಳೆಗಾರರು ಮತ್ತು ರೈತರು ತಾಲೂಕು ಕಚೇರಿಗಳ ಮುಂದೆ ಪ್ರತಿಭಟನೆ ಮಾಡಿ ಬಂದಗೆ ಬೆಂಬಲ ವ್ಯಕ್ತಪಡಿಸುವ ಮನವಿ ಮಾಡಿದರು.
ಮಾವು ಬೆಳೆಗಾರರಿಗೆ ಮೋಸವಾಗಿರುವುದು ಮತ್ತು ಬೆಲೆ ನಷ್ಟ ಪರಿಹಾರದಲ್ಲಿ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ವಿತರಣೆ ಮಾಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದರು.
ಮಾವು ಬೆಳೆಗಾರರು ರೈತರು ಹಾಗು ವಿವಿಧ ತೋಟಗಾರಿಕೆ ಬೆಳೆಗಾರರು ಭಾಗವಹಿಸಿದ್ದ ಸಭೆಯಲ್ಲಿ ಮಾವು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದ್ದು ಸರ್ಕಾರದ ವತಿಯಿಂದ ಶ್ರೀನಿವಾಸಪುರ ತಾಲೂಕುನ್ನು ಮಾವಿನ ಕೈಗಾರಿಕಾ ಪ್ರದೇಶವೆಂದು ಗುರುತಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕು ತೀರ್ಮಾನಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ ಫಸಲ್ ಭೀಮಾ ಯೋಜನೆಯಲ್ಲಿ ಎಚ್ ಡಿ ಎಫ್ ಸಿ ಇರುಗೊ ಬೆಳೆ ವಿಮಾ ಸಂಸ್ಥೆಯ ವಂಚನೆ ವಿರುದ್ದ ನವಂಬರ್ 9 ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹೋರಾಟಕ್ಕೆ ಸ್ಪಂದಿಸಿ ನವಂಬರ್ 16 ರಂದು ವಿಮಾ ಸಂಸ್ಥೆಯನ್ನು ಒಳಗೊಂಡಂತೆ ಕಂದಾಯ ಹಾಗು ತೋತಗಾರಿಕೆ ಇಲಾಖೆ ಜಂಟಿ ಸಭೆ ನಡೆಸಿ ನಿಮ್ಮ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದರು ಆದರೆ ಜಿಲ್ಲಾಧಿಕಾರಿ ಜಂಟಿ ಸಭೆಯಲ್ಲಿ ರೈತರ ಪರ ನೊಲವು ತಾಳದೆ ವಾಗಿ ಮಾತನಾಡದೆ ಬೆಳೆ ವಿಮಾ ಸಂಸ್ಥೆಯವರ ಹೇಳಿದ್ದೆ ಸರಿ ಎಂದು ಅವರ ಪರವಾಗಿ ಮಾತನಾಡಿ ರೈತರನ್ನು ಕಡೆಗಣಿಸಿದ್ದರಿಂದ ಬೇಸತ್ತು ಮುಂದಿನ ಹೋರಾಟಕ್ಕೆ ಇಳಿಯಬೇಕಾಗಿದೆ ಎಂದರು.
ಸಭೆಯಲ್ಲಿ ಕೆ ಪಿ ಆರ್ ಎಸ್ ರಾಜ್ಯ ಉಪಾಧ್ಯಕ್ಷ ಪಿ ಆರ್ ಸೂರ್ಯನಾರಾಯಣ, ಸಂಘದ ಪದಾಧಿಕಾರಿಗಳಾದ ಎನ್ ವೀರಪ್ಪ ರೆಡ್ಡಿ, ರೈತ ಸಂಘದ ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ, ಬೈಚೇಗೌಡ, ಸೈಯದ್ ಫಾರೂಕ್, ಅಸ್ಲಾಂಪಾಶ, ಬೇತಮಂಗಲ ಮುನಿವೆಂಟೆಗೌಡ, ಕೆಜಿಎಫ್ ತಾಲೂಕು ಕೃಷ್ಣಮೂರ್ತಿ, ಕೋಲಾರ ತಾಲೂಕು ಆನಂದ್ ಕುಮಾರ್ ,ವಿಶ್ವನಾಥ ರೆಡ್ಡಿ, ಶಿವರಾಜ್, ಶ್ರೀಧರ್ ಮುಂತಾದವರು ಭಾಗವಹಿಸಿದರು.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Thursday, April 3