ನ್ಯೂಜ್ ಡೆಸ್ಕ್:ಕಾಶಿ ಸೇರಿದಂತೆ ವಿವಿಧ ಯಾತ್ರೆ ಹೋಗುವ ರಾಜ್ಯದ ಭಕ್ತರಿಗೆ ನೀಡುತ್ತಿರುವ ಸಹಾಯಧನವನ್ನು ಭಾರತದ ಪ್ರಸಿದ್ಧ ಯಾತ್ರ ಸ್ಥಳವಾದ ಜಮ್ಮು ಕಾಶ್ಮೀರದಲ್ಲಿನ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ರಾಜ್ಯದ ಭಕ್ತರಿಗೆ ತಲಾ 5,000 ರೂನಂತೆ ನೀಡುವುದಾಗಿ ಮುಜರಾಯಿ ಇಲಾಖೆ ಘೋಷಿಸಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದಂತ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಭೆಯಲ್ಲಿ ಇತರೆ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರದ ಬಹುಮಹಡಿಗಳ ಕಟ್ಟಡ(ಎಂಎಸ್ ಬಿಲ್ಡಿಂಗ್) ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ 10 ಕೋಟಿ ರೂ ವೆಚ್ಚದಲ್ಲಿ ‘ಧಾರ್ಮಿಕ ಸೌಧ’ ನಿರ್ಮಿಸಲು ಇಲಾಖೆ ತೀರ್ಮಾನ,120 ವರ್ಷಗಳಷ್ಟು ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವ ಕೂರಿತು ತೀರ್ಮಾನ ಸೇರಿದಂತೆ
ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯ ಸರ್ವೇ. ಒತ್ತುವರಿ ತೆರವುಗೊಳಿಸಿ ದಾಖಲೆ ನೀಡುವುದು.
ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವ ಕುರಿತು ಚರ್ಚಿಸಿದ್ದು ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವುದು,ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವುದು,ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವುದು,ಸರ್ಕಾರ ನೀಡಿದ ಸೌಲಭ್ಯಗಳ ಫಲಕ ಅಳವಡಿಕೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಲಾದ ಸೌಲಭ್ಯಗಳ ಬಗ್ಗೆ ಸಾರ್ವಜನಿಕ ಮಾಹಿತಿ ನೀಡುವ ಸಲುವಾಗಿ ಪ್ರಮುಖ ದೇವಾಲಯಗಳ ಮುಂದೆ ವಿವರವಾದ ಬೋರ್ಡ್ (ಫಲಕ) ಹಾಕುವುದು.
ಫಲಕದಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅರ್ಚಕರಿಗೆ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂ ಸಹಾಯಧನ, ಕಾಶಿ ಯಾತ್ರೆ, ಚಾರ್ ಧಾಮ್ ಯಾತ್ರೆ ಮತ್ತು ಮಾನಸ ಸರೋವರ ಹಾಗೂ ವೈಷ್ಣೋದೇವಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ಮಂಜೂರು. ಸರ್ಕಾರದ ವತಿಯಿಂದ ಭಾರತ್ ಗೌರವ್ ಯಾತ್ರೆ ಅಡಿಯಲ್ಲಿ ಕಾಶಿ, ಗಯಾ, ಅಯೋಧ್ಯೆ, ಪ್ರಯಾಗ್ ರಾಜ್ ಯಾತ್ರೆಗೆ ಸಹಾಯ.
ದಕ್ಷಿಣ ಭಾರತ ಯಾತ್ರೆ: ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ. ದ್ವಾರಕ ಯಾತ್ರೆ: ದ್ವಾರಕ, ನಾಗೇಶ್ವರ, ಸೋಮನಾಥ್, ಶ್ರೀ ತ್ರಯಂಭತೇಶ್ವರ. ಪುರಿ ಜಗನ್ನಾಥ್ ಯಾತ್ರೆ: ಪುರಿ, ಕೊನಾರ್ಕ್, ಗಂಗಾಸಾಗರ್, ಕೋಲ್ಕತಾ. ಭಾರತ್ ಗೌರವ್ ಯಾತ್ರೆ ಅಡಿಯಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಒಟ್ಟು 2,400 ಜನರಿಗೆ ಉಚಿತ ಯಾತ್ರೆ ವ್ಯವಸ್ಥೆ ಕಲ್ಪಿಸುತ್ತಿರುವ ಬಗ್ಗೆ ಪ್ರಕಟಿಸಲು ತೀರ್ಮಾನ.
“ಸಿ” ವರ್ಗದ ಆನುವಂಶಿಕ ಅರ್ಚಕರ ನೇಮಕಾತಿ ಅಧಿಕಾರವನ್ನು ಆಯಾ ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವುದು.ಆನುವಂಶಿಕ ಅರ್ಚಕರು ಅನಾರೋಗ್ಯ ನಿಮಿತ್ತ ಕಾರ್ಯನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಅವರ ಕುಟುಂಬದವರಿಗೆ ನೇಮಕಾತಿ ಆದೇಶ ನೀಡುವ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವುದು. ಆಯಾ ಮುಜರಾಯಿ ದೇವಾಲಯಗಳ ಹಣವನ್ನು ದೇವಾಲಯಗಳಿಗೆ ಮಾತ್ರವೇ ಉಪಯೋಗಿಸಲಾಗುತ್ತಿದೆ ಎಂಬ ಮಾಹಿತಿಯನ್ನು, ಮಾಂಗಲ್ಯ ಭಾಗ್ಯ ಯೋಜನೆಯಡಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸುವ ಬಗ್ಗೆ ಫಲಕದಲ್ಲಿ(ಬೋರ್ಡ್) ಮಾಹಿತಿ ನೀಡುವುದು ನಿರ್ಧರಿಸಲಾಗಿದೆ.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Thursday, April 3