ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Thursday, November 21