ಕೋಲಾರ: ಕೋಲಾರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ(SP)ನಾರಾಯಣ ಅವರನ್ನು ವರ್ಗಾವಣೆ ಮಾಡಲಾಗಿದೆ, ಇಲ್ಲಿ ಸೇವೆ ಸಲ್ಲಿಸಿದ್ದ ಡಿ.ದೇವರಾಜ್ ಅವರನ್ನು ಇಲ್ಲಿಂದ ವರ್ಗಾಯಿಸಲಾಗಿದ್ದು ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ ಎಂದು ಹೇಳಲಾಗಿದೆ.
ನಾರಯಣ ಅವರು ಗುಪ್ತಚರ ಇಲಾಖೆ ಎಸ್ಪಿಯಾಗಿದ್ದವರು.
ಕೋಲಾರ ಜಿಲ್ಲಾ ಪೊಲೀಸ್ ನೂತನ ವರಿಷ್ಠಾಧಿಕಾರಿ ಎಂ.ನಾರಾಯಣ ಶುಕ್ರವಾರ ಸಂಜೆ ನಿರ್ಗಮಿತ ಎಸ್ಪಿ ಡಿ.ದೇವರಾಜ್ರಿಂದ ಅಧಿಕಾರ ಸ್ವೀಕರಿಸಿದರು.
ಒಟ್ಟು 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರ ಇತ್ತೀಚೆಗೆ 53 ಐಪಿಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಕೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.
ಎಂ.ನಾರಾಯಣ, ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ
ವೈ.ಎಸ್.ರವಿಕುಮಾರ್, ಡಿಐಜಿಪಿ, ನಿರ್ದೇಶಕ, ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯ
ದಿವ್ಯಾ ವಿ.ಗೋಪಿನಾಥ್, ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
ಆರ್.ಚೇತನ್, ಕಲಬುರಗಿ ನಗರ ಪೊಲೀಸ್ ಕಮಿಷನರ್
ಹನುಮಂತರಾಯ, ಪೊಲೀಸ್ ವರಿಷ್ಠಾಧಿಕಾರಿ, ಗುಪ್ತದಳ ಹಾವೇರಿ
ಡಾ. ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ, ಹಾವೇರಿ
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವರ್ಗಾವಣೆ
ಈ ಹಿಂದೆ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿತ್ತು.
42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಸಹ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.