ಕೋಲಾರ:ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ವಿಭಾಗದ ಉಪಾಧ್ಯಕ್ಷರಾಗಿ ಶ್ರೀನಿವಾಸಪುರ ತಾಲೂಕಿನ ಪಣಸಮಾಕನಹಳ್ಳಿ ನರಸಿಂಹಮೂರ್ತಿ ನೇಮಕ ಗೊಂಡಿರುತ್ತಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನರಸಿಂಹಮೂರ್ತಿ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆ ಗುರುತಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೋಲಾರ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಜಯದೇವ್ ಅನುಮೋದನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಧರ್ಮಸೇನ ಅವರು ನನ್ನ ಮೆಲೆ ವಿಶ್ವಾಸ ಇಟ್ಟು ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಅವರ ಸೂಚನೆಯಂತೆ ಕೋಲಾರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಂಘಟನೆಗೆ ಒತ್ತು ನೀಡುವ ಮೂಲಕ ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ಪಕ್ಷ ಸಂಘಟನೆ ಮಾಡುವುದಾಗಿ ನರಸಿಂಹಮೂರ್ತಿ ತಿಳಿಸಿದರು.
