ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ, ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನ್ಯೂಜ್ ಡೆಸ್ಕ್:ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ನಾಲ್ವರು ವಿದ್ಯಾರ್ಥಿನಿಯರು ನೇಣು ಶಾರಣಾದ ಧಾರುಣ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ.
ಹಿರೇಕೆರೂರಿನ ಕಾವ್ಯ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ವಿದ್ಯಾರ್ಥಿನಿ ಕಾವ್ಯ ಬಸಪ್ಪ ಲಮಾಣಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪರಿಕ್ಷೆ ಬರದಿದ್ದ ವಿದ್ಯಾರ್ಥಿನಿ ಕಾವ್ಯ ನಾಲ್ಕು ವಿಷಯದಲ್ಲಿ ಫೇಲ್ ಆಗಿದ್ದಳು. ಇದರಿಂದ ಬೇಸರಗೊಂಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಮೈಸೂರಿನ ಐಶ್ವರ್ಯ
ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಪೊಷಕರೊಂದಿಗೆ ವಾಸವಿದ್ದ 19 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದ್ದು ಹೊರಬಿದ್ದ ಫಲಿತಾಂಶದಲ್ಲಿ ಫೇಲ್ ಆದ ಕಾರಣ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹೊಳಲ್ಕೆರೆ ಕೃಪಾ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದಾವಣಗೆರೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕುಡಿನೀರುಕಟ್ಟೆ ಗ್ರಾಮದ ವಿದ್ಯಾರ್ಥಿನಿ ಕೃಪಾ ವಿಜ್ಞಾನ ವಿಭಾಗದಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾಳೆ.
ದಾವಣಗೆರೆಯ ಪುಷ್ಪಾ ಮಹಲಿಂಗಪ್ಪ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕೃಪಾ ಚಂದ್ರಶೇಖರಪ್ಪ, ವೀಣಾ ದಂಪತಿಯ ಏಕೈಕ ಪುತ್ರಿಯಾಗಿದ್ದು ಮಗಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿರುಗುಪ್ಪದ ಕಾಮರ್ಸ್ ವಿದ್ಯಾರ್ಥಿ ವಿಜಯಲಕ್ಷ್ಮಿ
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಸಿರಗುಪ್ಪದ ವಿಕೆಜಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಅಭ್ಯಾಸ ಮಾಡುತ್ತಿದ್ದು ಸಮಾಜಸಾಶ್ತ್ರದಲ್ಲಿ ನೀರಿಕ್ಷಿತ ಅಂಕ ಬಂದಿಲ್ಲ ಎಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.