ನ್ಯೂಜ್ ಡೆಸ್ಕ್:- ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ಚುನಾವಣೆ ನಡೆಯಲಿದೆ ಇಂತ ಸಮಯದಲ್ಲಿ ಅಲ್ಲಿನ ಕಾಂಗ್ರೆಸ್ ವಿಕೆಟ್ ಒಂದು ಪತನ ಗೋಂಡಿದೆ ತನ್ನ ಪಕ್ಷಕ್ಕೆ ಕೈಕೊಟ್ಟು ಬಿ.ಜೆ.ಪಿ ಪಡಾಸಾಲೆಯಲ್ಲಿ ಹೋಗಿ ಕುಳಿತಿದ್ದಾರೆ. ರಾಹುಲ್ ಗಾಂಧಿ ಆಪ್ತ ವಲಯದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ್ ಇದು ಉತ್ತರ ಪ್ರದೇಶದ ಕಾಂಗ್ರೆಸ್ಸಿಗೆ ದೊಡ್ಡ ಹೊಡೆತ ನೀಡಿರುತ್ತಾರೆ.
ಕಾಂಗ್ರೆಸ್ ತೊರೆದಿರುವ ಜಿತಿನ್ ಪ್ರಸಾದ್ ಬುಧವಾರ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಛೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ ಮತ್ತು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳೆಲ್ಲಾ ಪ್ರಾದೇಶಿಕ ಪಕ್ಷಗಳು ಎಂದು ಹೇಳಿರುವ ಜಿತಿನ್, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ಈಗ ದೇಶ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲರು ಎಂದಿರುತ್ತಾರೆ.
ಜಿತಿನ್ ರವರಿಗೆ ಪಕ್ಷದ ಸದಸ್ಯತ್ವ ನೀಡಿ ಮಾತನಾಡಿದ ಪಿಯೂಷ್ ಗೋಯಲ್, ಜಿತಿನ್ ಅವರು ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ಓಡಾಡಿ ಜನರಿಗಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.
2019 ರಲ್ಲೇ ಜಿತಿನ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವಾದರೂ, ಪ್ರಿಯಾಂಕಾ ಗಾಂಧಿ ಮನವೊಲಿಸಿದ್ದರು.
ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಜಿತಿನ್, 2004 ರಲ್ಲಿ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಕೇಂದ್ರದಲ್ಲಿ ಯುಪಿಎ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು.