ಶ್ರೀನಿವಾಸಪುರ: ತಾಲೂಕಿನ ದ್ವಾರಸಂದ್ರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವವು ಸಹಸ್ರಾರು ಭಕ್ತರ ನಡುವೆ ಸಂಬ್ರಮ ಸಡಗರದಿಂದ ನೇರವೇರಿತು ವೈದಿಕರು ಮಂತ್ರ ಘೋಷ ಮಂಗಳ ವಾದ್ಯಗಳು ಹಾಗು ತಮಟೆ ವಾದ್ಯಗಳ ನಡುವೆ ಸ್ವಾಮಿ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಹೂವು ಹಾಗು ವಸ್ತ್ರಗಳಿಂದ ಅಲಂಕರಿಸಿದ್ದ ಬ್ರಹ್ಮ ರಥದಲ್ಲಿ ಪ್ರತಿಷ್ಠಾಪಿಸಿ ಬಳಿಕ ಭಕ್ತರ ಗೋವಿಂದ ನಾಮಸ್ಮರಣೆ ಜಯಘೋಷಗಳ ನಡುವೆ ರಥವನ್ನು ಎಳೆಯಲಾಯಿತು ಈ ಸಂದರ್ಭದಲಿ ಭಕ್ತರು ರಥಕ್ಕೆ ಬಾಳೆಹಣ್ಣು ಧವನ ಎಸೆದು ಹರಿಕೆ ಸಲ್ಲಿಸಿದರು.ಬ್ರಹ್ಮ ರಥೋತ್ಸವದ ಅಂಗವಾಗಿ ಬೃಹತ್ ಅನ್ನಸಂತರ್ಪಣೆ ನಡೆಯಿತು ಸಹಸ್ರಾರು ಭಕ್ತರು ದೇವರ ಅನ್ನಪ್ರಸಾದ ಸ್ವೀಕರಿಸಿ ಪುನಿತರಾದರು.ಶಾಸಕ ವೆಂಕಟಶಿವಾರೆಡ್ದಿ,ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ರಥೋತ್ಸವದಲ್ಲಿ ಭಾಗವಹಿಸಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿದರು. ಬ್ರಹ್ಮ ರಥೋತ್ಸವದ ಹಿಂದಿನ ದಿನ ದೇವಾಲಯದ ಸಭಾ ಭವನದಲ್ಲಿ ಅದ್ದೂರಿ ಕಲ್ಯಾಣೋತ್ಸವ ಏರ್ಪಡಿಸಲಾಗಿತ್ತು.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Friday, November 22