ನ್ಯೂಜ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ 16ನೇ ಬಾರಿಗೆ ಬಜೆಟ್ ಮಂಡಿಸಿಸುವ ಮೂಲಕ ದಾಖಲೆ ಬಜೆಟ್ ಮಂಡಿಸಿದ್ದಾರೆ 2025-26ನೇ ಸಾಲಿನ ಬಜೆಟ್ ಅನ್ನು ಬರೊಬ್ಬರಿ 3 ಗಂಟೆ 30 ನಿಮಿಷಗಳ ಕಾಲ ಮುಂಗಡ ಪತ್ರ ಓದಿ ಮಂಡಿಸಿದರು.
ಈ ಬಾರಿಯ ಬಜೆಟ್ನಲ್ಲಿ ಗ್ಯಾರೆಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಬೃಹತ್ ಅನುಧಾನ ಮೀಸಲಿಟ್ಟಿದ್ದಾರೆ.
ಬಜೆಟ್ ನಲ್ಲಿ ಉಪಮುಖ್ಯಮಂತ್ರಿಗಳಾದ ಶಿವಕುಮಾರ್ ಅವರ ಕನಸಿನ ಬ್ಯ್ರಾಂಡ್ ಬೆಂಗಳೂರಿಗೆ ಹೆಚ್ಚಿನ ಅನುಧಾನಗಳನ್ನು ನೀಡುವ ಮೂಲಕ ಯೋಜನೆಗಳ ಮಹಾಪೂರವೆ ಹರಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆ ಜಾರಿ.
ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ.
ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಉನ್ನತೀಕರಣ,ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶ ಹೊಂದಲಾಗಿದೆ.
ಬೆಂಗಳೂರಿನ ಕೆ.ಆರ್.ಪುರಂ ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ.
ಕೆ.ಆರ್.ಪುರಂ ನಿಂದ ಮೈಸೂರು ರಸ್ತೆಯ ನಾಯಂದಹಳ್ಳಿ ವರಿಗೂ 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (Tunnel) ಕಾರಿಡಾರ್.
ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್-ಡೆಕ್ಕರ್ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
ಕಾವೇರಿ 6ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
ಬೆಂಗಳೂರು ಬಿಸ್ನೆಸ್ ಕಾರಿಡಾರ್ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.
ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ವಿಭಜಿತ ಕೋಲಾರ-ಚಿಕ್ಕಬಳ್ಳಾಪುರಕ್ಕೇನು
ಚಿಂತಾಮಣಿ ಇಂಜನಿಯರಿಂಗ್ ಕಾಲೇಜು
ಚಿಂತಾಮಣಿ ತಾಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ ಮಾಡಲಾಗುವುದು.
ಕೋಲಾರ ಜಿಲ್ಲೆಗೆ ಸಂಬಂದಿಸಿದಂತೆ ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು,ಕೆ.ಜಿ.ಎಫ್ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರಕ್ಕೆ ಹೈಟೆಕ್ ಹೂವಿನ ಮಾರುಕಟ್ಟೆ
ಪುಷ್ಪೋದ್ಯಮದಲ್ಲಿ ತೊಡಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾದ ಹೈಟೆಕ್ ಹೂವಿನ ಮಾರುಕಟ್ಟೆಗೆ ಅದರಲ್ಲೂ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಲು ಒತ್ತು.
ಪತ್ರಕರ್ತರ ಮಾಸಾಶನ ಹೆಚ್ಚಳ ಹಾಗು ಆರೋಗ್ಯ ಸಂಜೀವಿನಿ
ಪತ್ರಕರ್ತರ ಮಾಸಾಶನ 15 ಸಾವಿರ ರೂ.ಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗೆ ಹೆಚ್ಚಳ ಮಾಡಲಾಗಿದೆ. ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮ ಕೈಗೊಳ್ಳಲಾಗುವುದು. ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ ಮಾಡಲಾಗುವುದು.
ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗೆ 200 ರೂಪಾಯಿ ನಿಗದಿ
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದ್ದು ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂಕ್ಕೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ
ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ
ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು.
ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಹಾಗೆ ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ಇತರೆ ಪ್ರಮುಖ ಘೋಷಣೆಗಳು
ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳ ಸ್ಥಾಪನೆಗೆ 750 ಕೋಟಿ ರೂ. ವೆಚ್ಚ
ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ.
ಅರಣ್ಯ ಪ್ರದೇಶದಲ್ಲಿ 28,494 ಹೆಕ್ಟೇರ್ನಲ್ಲಿ 213 ಲಕ್ಷ ಸಸಿಗಳನ್ನು ಹಾಗೂ ಅರಣ್ಯೇತರ ಪ್ರದೇಶದಲ್ಲಿ 1,200 ಹೆಕ್ಟೇರ್ನಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಿ ನೆಡುತೋಪುಗಳ ನಿರ್ವಹಣೆಗೆ ಕ್ರಮ.
ಹೊಸ ಭೂ-ಕಂದಾಯ ಕಾಯ್ದೆ ಜಾರಿಗೆ ಕ್ರಮ.
Breaking News
- ಮಾಲೂರಿನ ಬೈರನದೊಡ್ಡಿ ನಗರೇಶ್ವರ ದೇವಾಲಯ ಲೋಕಾರ್ಪಾಣೆ
- ಚಿಂತಾಮಣಿ-ಮದನಪಲ್ಲಿ ರಸ್ತೆ ಖಾಸಗಿ ಬಸ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ!
- ಅವಿಭಜಿತ ಕೋಲಾರ ಜಿಲ್ಲೆಯ ರೈತರಿಗೆ ನಿರಾಶದಾಯಕ ಬಜೆಟ್ ಎಲ್ಲೆಡೆ ಟೀಕೆ!
- ಮಾವುಬೆಳೆಗಾರರಿಗೆ ಏನೂ ಘೊಷಿಸದ ಸಿದ್ದರಾಮಯ್ಯ sweet 16 ಬಡ್ಜೆಟ್.
- ಶ್ರೀನಿವಾಸಪುರ ಜನರಿಂದ ಸಿದ್ದರಾಮಯ್ಯ ಬಜೆಟ್ ಮೇಲೆ ಭಾರೀ ನೀರಿಕ್ಷೆ!
- ಜೆಡಿಎಸ್ CMR ಶ್ರೀನಾಥ್ ಮನೆಗೆ ಪೇಜಾವರ ಸ್ವಾಮಿಜಿ ಭೇಟಿ!
- ಬುಲೆಟ್ ಬೈಕುಹತ್ತಿ ಪೋಲಿರೈಡ್ ಮಾಡಿದ್ದ LOVER ಬಂಧನ!
- ಕಾಂಗ್ರೆಸ್ ಮಂತ್ರಿ ವಿರುದ್ದ ಅರಣ್ಯ ಭೂಮಿ ಒತ್ತುವರಿ ಆರೋಪ
- ಶ್ರೀನಿವಾಸಪುರ:ವಿಧವೆ ಮನೆಶೆಡ್ ಕಾಂಪೌಂಡ್ ದೌರ್ಜನ್ಯದಿಂದ ಧ್ವಂಸ ಆರೋಪ
- ಶ್ರೀನಿವಾಸಪುರ:ಶಿವರಾತ್ರಿ ಸಂಭ್ರಮ ಅರಕೇರಿ ನಾಗನಾಥೇಶ್ವರನಿಗೆ ರಥೋತ್ಸವ
Wednesday, March 12