ಶ್ರೀನಿವಾಸಪುರ:ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಜಾರಿಯಾಗಿದ್ದು, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಇಂದು ಶನಿವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಜಿ.ಕೆ.ವೆಂಕಟಶಿವಾರೆಡ್ಡಿ ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ,ಮಾಜಿ ಸದಸ್ಯ ಎಂ.ವಿ.ಶ್ರೀನಿವಾಸ್,ಪುರಸಭೆ ಉಪಾಧ್ಯಕ್ಷೆ ಅಯಿಶಾಖಾನಂ ಹಾಗು ಮಾಜಿ ಅಧ್ಯಕ್ಷ ಮುನಿಯಪ್ಪ ಜೊತೆಗೂಡಿ ಶ್ರೀನಿವಾಸಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮ ಪತ್ರ ಸಲ್ಲಿಸುವುದಕ್ಕೂ ಮುಂಚಿತವಾಗಿ ತಮ್ಮ ಕಾರ್ಯಕರ್ತರೊಂದಿಗೆ ಕುರುಡುಮಲೆ ವಿನಾಯಕ ದೇವಾಲಯದಲ್ಲಿ ತಮ್ಮ ಹೆಸರು ಗೋತ್ರ ಹೇಳದೆ ಸರ್ವಜನರ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅವರು ನಂತರ ಪಟ್ಟಣದ ಮುಳಬಾಗಿಲು ರಸ್ತೆಯಲ್ಲಿನ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ನಾಮ ಪತ್ರ ಸಲ್ಲಿಸಿದ್ದಾರೆ.
