ಶ್ರೀನಿವಾಸಪುರ: ತಾಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಯಲ್ಪಾಡು ಹೋಬಳಿ ಸುಣ್ಣಕಲ್ಲು ಗ್ರಾಮದ ಕೋಟೆ ಜಾಗದಲ್ಲಿದ್ದ ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನ ದೇವಾಲಯಕ್ಕೆ ಸೇರಿರುವಂತ ಸ್ಥಳವನ್ನು ಖಾಸಗಿ ವ್ಯಕ್ತಿಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಖಾತೆ ಮಾಡಿಕೊಟ್ಟಿದ್ದಾರೆ ಎಂದು ಸಂಸದ ಮುನಿಸ್ವಾಮಿ ಆರೋಪಿಸಿದರು.
ಅಕ್ರಮವಾಗಿ ಒತ್ತುವರಿಯಾಗಿರುವಂತ ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ಜಾಗಕ್ಕೆ ಸಂಸದ ಮುನಿಸ್ವಾಮಿ ಭೇಟಿ ನೀಡಿ ಅಲ್ಲಿದ್ದ ದೇವರ ಮೂರ್ತಿಗಳಿಗೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಸಂಸದ ಮುನಿಸ್ವಾಮಿ ಸುಮಾರು 11 ಎಕರೆ ಜಾಗ ಒತ್ತುವರಿಯಾಗಿದ್ದು ಇದಕ್ಕೆ ಕಂದಾಯ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಹಣ ನೀಡಿದರೆ ದೇವಸ್ಥಾನದ ಜಾಗವನ್ನು ಖಾತೆ ಮಾಡಿಕೊಡ್ತೀರಾ? ದೇವಸ್ತಾನದ ಜಾಗ ಹದ್ದುಬಸ್ತು ಮಾಡದೆ ಹೋದರೆ ನಾನು ಸುಮ್ಮನೆ ಕೂರುವುದಿಲ್ಲ ಎಂದು ಅಧಿಕಾರಿಯ ವಿರುದ್ದ ಹರಿಹಾಯ್ದರು.
ಈ ಸಂದರ್ಭದಲ್ಲಿ ರಾಯಲ್ಪಾಡು ಹೋಬಳಿಯ ರಾಜಸ್ವ ನಿರೀಕ್ಷಕ ಗುರುರಾಜ್ ರಾವ್ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ರೋಣೂರು ಚಂದ್ರಶೇಖರ್, ಸೇರಿದಂತೆ ಮುಂತಾದವರು ಇದ್ದರು.