- ಕೋಲಾರ ಟಿಕೆಟ್ ಹಂಚಿಕೆ ಬೀದಿಗೆ ಬಂದ ಬಣ ಜಗಳ
- ಟ್ರಬಲ್ ಶೂಟರ್ ಶಿವಕುಮಾರ್ ಅಂಗಳಕ್ಕೆ
- ಶಿವಕುಮಾರ್ ನಿರ್ಧಾರದತ್ತ ಕಾರ್ಯಕರ್ತರು
- ಜೆಡಿಎಸ್ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆ
ಕೋಲಾರ:ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷದ ಬಣಗಳ ನಡುವಿನ ಕಿತ್ತಾಟದಿಂದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇದು ವರಿಗೂ ಬಗೆಹರಿದಿಲ್ಲ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಲಿದ್ದರು ಕೋಲಾರ ಬಿಜೆಪಿ ಅಭ್ಯರ್ಥಿ ಅಯ್ಕೆ ಹೈಕಮಾಂಡ್ಗೆ ಬಿಸಿ ತುಪ್ಪವಾಗಿದೆ ಮುನಿಯಪ್ಪ-ರಮೇಶ್ಕುಮಾರ್ ಬಣಗಳ ನಡುವಿನ ತಿಕ್ಕಾಟ ಜೋರಾಗಿದ್ದು, ಒಂದು ಬಣದ ಪರ ಅಭ್ಯರ್ಥಿಗೆ ಟಿಕೆಟ್ ಸಿಕ್ಕರೆ ಮತ್ತೊಂದು ಬಣ ವಿರೋಧವಾಗಿ ಕೆಲಸ ಮಾಡುವ ಸಾಧ್ಯತೆಗಳಿವೆ. ಸಚಿವ ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವುದಕ್ಕೆ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೋಲಾರ ಭಾಗದ ಕಾಂಗ್ರೆಸ್ ಶಾಸಕರು, ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಬಗ್ಗೆ ನಡೆದಂತ ಹೈಡ್ರಾಮ ಕೋಲಾರ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ಕೋಲಾಹಲವನ್ನೆ ಸೃಷ್ಟಿಸಿದಿಯಂತೆ ಇದಕ್ಕೆ ತಾರಕಿಕ ಅಂತ್ಯ ಹಾಡಲು ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಏನು ನಿರ್ಧಾರ ತಗೆದುಕೊಳ್ತಾರೊ ಎಂದು ಕಾಂಗ್ರೆಸ್ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದಾರೆ.
ಕಾಂಗ್ರೆಸ್ ಜಗಳ ಲಾಭ ಪಡೆಯುವ ನಿಟ್ಟಿನಲ್ಲಿ ಮೈತ್ರಿ ಕೂಟ!
ಕಾಂಗ್ರೆಸ್ ಪಕ್ಷದೊಳಗಿರುವಂತಹ ಒಳಜಗಳದ ಲಾಭ ಪಡೆಯಲು ಮುಂದಾಗಿರುವ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷದಿಂದ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬುದನ್ನು ಕಾದು ನೋಡಿ ನಂತರ ಅಭ್ಯರ್ಥಿ ಘೋಷಿಸಲು ತೀರ್ಮಾನಿಸಿದ್ದಾರಂತೆ, ಮಂಗಳವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸೂಚನೆ ಮೇರೆಗೆ ಬಂಗಾರಪೇಟೆ ಪರಾಜಿತ ಅಭ್ಯರ್ಥಿ ಮಲ್ಲೇಶ್ಬಾಬು ಅವರಿಗೆ ಟಿಕೆಟ್ ಅಧಿಕೃತವಾಗಿ ಅಭ್ಯರ್ಥಿ ಘೋಷಣೆ ಮಾಡಿದ್ದರು,ಈಗ ಬದಲಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿರುವ ಜೆಡಿಎಸ್ ಕೊನೆ ಕ್ಷಣದಲ್ಲಿ ಬಲಗೈ ಸಮುದಾಯಕ್ಕೆ ಸೇರಿದ ನಿಸರ್ಗ ನಾರಾಯಣಸ್ವಾಮಿ ಅವರನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದೆ.
ಬಣ ಜಗಳದ ಬಗ್ಗೆ ಒಪ್ಪಿಕೊಂಡ ಸಿಎಂ
ಈ ಬಗ್ಗೆ ಸ್ವತಃ ಸಿಎಂಸಿದ್ದರಾಮಯ್ಯ ಮೈಸೂರಿನಲ್ಲಿ ಮಾತನಾಡಿ ಕಾಂಗ್ರೆಸ್ ಟಿಕೆಟ್ ಸಂಬಂಧ ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ. ದಲಿತ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂಬ ಒತ್ತಾಯವಿದೆ. ಈ ಬಗ್ಗೆ ನಾನು ಅವರ ಜತೆ ಮಾತನಾಡಿದ್ದು, ಸಮಾಧಾನದಿಂದ ಇರುವಂತೆ ಹೇಳಿದ್ದೇನೆ. ಆ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬೆರೆ ಭಾಷೆ ಮಾಧ್ಯಗಳಲ್ಲೂ ಕೋಲಾರ ಜಗಳ
ಕೋಲಾರ ಕಾಂಗ್ರೆಸ್ ಬಣಗಳ ನಡುವಿನ ಒಳಜಗಳ ರಾಷ್ಟ್ರೀಯ ಸುದ್ಧಿ ವಾಹಿನಿಗಳು ಸೇರಿದಂತೆ ತೆಲಗು ತಮಿಳು ಹಾಗು ಇತರೆ ಭಾಷೆ ಮಾಧ್ಯಮಗಳಲ್ಲೂ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗುತ್ತಿದೆ