ಶ್ರೀನಿವಾಸಪುರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸನ್ ಹತ್ಯೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಶ್ರೀನಿವಾಸಪುರ ಬಂದ್ ಸಂಪೂರ್ಣವಾಗಿ ಯಶಸ್ವಿಯಾಯಿತು.
ಪಟ್ಟಣದ ವ್ಯಾಪಾರಸ್ಥರು,ಹೋಟೆಲ್ ಮಾಲಿಕರು ಮುಂಜಾನೆಯಿಂದಲೆ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದ್ದರು,ಆಟೋ ಚಾಲಕರು ಮತ್ತು ಖಾಸಗಿ ವಾಹನಗಳ ಚಾಲಕರು ಮಾಲಿಕರು ತಮ್ಮ ವಾಹನಗಳನ್ನು ಬೀದಿಗಿಳಿಸದೆ ಬಂದ್ ಗೆ ಸಹಕಾರ ನೀಡಿದ್ದರು,ಬಂದ್ ಅಂಗವಾಗಿ ಬಹುತೇಕ ಶಾಲಾಕಾಲೇಜುಕಳಿಗೆ ರಜಾ ಘೋಷಿಸಲಾಗಿತ್ತು,ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಖಾಸಗಿ ಬ್ಯಾಂಕುಗಳು ವಾಣಿಜ್ಯ ಸಂಸ್ಥೆಗಳು ಬಾಗಿಲು ತೆಗೆದಿದ್ದಾದರೂ ಪ್ರತಿಭಟನಾಕಾರರು ಅವುಗಳ ಬಾಗಿಲು ಹಾಕಿಸಿದರು.ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಳಬಾಗಿಲು.ಕೋಲಾರ,ಚಿಂತಾಮಣಿಗೆ ಒಡಾಡಿತಾದರು ಪಟ್ಟಣದ ಒಳಗೆ ಬಾರದೆ ಹೊರ ವಲಯದ ಸುಮಾರು 1-2 ಕೀ.ಮಿ ದೂರದಿಂದ ಬಸ್ಸುಗಳನ್ನು ಆಪರೇಟ್ ಮಾಡಿದರು,ಬಂದ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಪುರಷರು ಅಷ್ಟೆ ಅಲ್ಲದೆ ಮಹಿಳೆಯರು ಯುವತಿಯರು ಸ್ವಯಂ ಪ್ರೇರಿತರಾಗಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಬಂದ್ ಗೆ ಕರೆ ನೀಡಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಂದಿರಾಭವನ್ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ರಚಿಸಿ ಹತ್ಯೆ ಮಾಡಿದವರನ್ನು ಉಗ್ರ ಶಿಕ್ಷೆಗೆ ಒಳಪಡಿಸುವಂತೆ ಅಗ್ರಹಿಸಿ, ಕ್ರಾಂತಿಗೀತೆಗಳನ್ನು ಹಾಡಿದರು.ನಂತರ ಪಟ್ಟಣದ ಮುಖ್ಯ ರಸ್ತೆ, ಎಂ.ಜಿ.ರಸ್ತೆ,ರಾಜಾಜಿ ರಸ್ತೆ ವಲ್ಲಭಾಯಿ ರಸ್ತೆ, ಅಜಾದ್ ರಸ್ತೆಗಳಲ್ಲಿ ಮುಖ್ಯರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ನಂತರ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಹತ್ಯೆಯಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವ ಎಲ್ಲಾ ಆರೋಪಿಗಳನ್ನು ಮಂಪರು ಪರಿಕ್ಷೆಗೆ ಒಳಪಡಿಸಬೇಕು,ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಬೇಕು,ಕೊಲೆ ಪ್ರಕರಣ ಸಂಬಂದಿಸಿದಂತೆ ಉಚ್ಛಾ ನ್ಯಾಯಲಯದ ಪ್ರಾಸಿಕ್ಯೂಟರ್ ನೇಮಕ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಬಂದ್ ಬೆಂಬಲಿಸಿ ರಿಪಬ್ಲಿಕ್ ಪಾರ್ಟಿ,ಕಾಂಗ್ರೆಸ್ ಪಕ್ಷದ,ದಲಿತ ಸಂಘಟನೆಗಳ,ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
Breaking News
- ಶ್ರೀನಿವಾಸಪುರ ಕಸಬಾ ಸೊಸೈಟಿ ಅಧ್ಯಕ್ಷ ಗಾದಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಚುನಾವಣೆ!
- ಶ್ರೀನಿವಾಸಪುರ ಜೆ.ತಿಮ್ಮಸಂದ್ರ ಪಂಚಾಯಿತಿ ಅಧ್ಯಕ್ಷರಾಗಿ ಕಲ್ಲೂರು ಶಂಕರರೆಡ್ಡಿ
- ಚಿಂತಾಮಣಿ ವ್ಯಕ್ತಿ ಆಂಧ್ರದ ರಸ್ತೆ ಅಪಘಾತದಲ್ಲಿ ಸಾವು
- ಶ್ರೀನಿವಾಸಪುರ ಕನಕದಾಸರ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ದ ಶಾಸಕ ಗರಂ!
- ಶ್ರೀನಿವಾಸಪುರ ಸರ್ಕಾರಿ ನೌಕರರ ಸಂಘದ ಹೊಸ BOSS ಭೈರೇಗೌಡ
- ಶ್ರೀನಿವಾಸಪುರದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಗಿರಿಜಾ ಕಲ್ಯಾಣ
- RCS ಮಂಡಿ ವತಿಯಿಂದ ಬೆಂಗಳೂರು ಕೃಷಿ ಮೇಳಕ್ಕೆ ಬಸ್ಸುಗಳ ವ್ಯವಸ್ಥೆ.
- ಅಮೇರಿಕಾದ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ಹಿಂದು ತುಳಸಿ ಗಬ್ಬಾರ್ಡ್!
- ವೈಷ್ಣೋದೇವಿ ಯಾತ್ರೆಗೂ ಸಹಾಯಧನ ಮಂತ್ರಿ ರಾಮಲಿಂಗಾರೆಡ್ಡಿ ಘೋಷಣೆ
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಒರ್ವ ಸಾವು!
Friday, November 22